Breaking News

ಲೂಟಿಕೋರರ ಪಿತಾಮಹ ನೀನು: ವಿಧಾನಸಭೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಸಿಎಂ ಡಿಕೆಶಿ

Spread the love

ಬೆಂಗಳೂರು : “ಬಿಜೆಪಿಯ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಲೂಟಿಕೋರರ ಪಿತಾಮಹ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಚರ್ಚೆ ಮೇಲಿನ ಪ್ರಸ್ತಾಪ ಮುಂದುವರೆಸಲು ಮುಂದಾದರು.

ಈ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಹಗಲು ದರೋಡೆ ಮಾಡಿರುವ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಅವರು ಸದನಕ್ಕೆ ಹಾಜರಾಗಬೇಕು ಎಂದು ಪಟ್ಟು ಹಿಡಿದರು.

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಸಿದ್ದರಾಮಯ್ಯ ಅವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ವಿಷಯದ ಚರ್ಚೆಗೆ ಪ್ರಸ್ತಾಪ ಮಾಡಿದಾಗೆಲ್ಲ ಬಿಜೆಪಿಯ ಮುಖ್ಯಮಂತ್ರಿಗಳು ಸದನದಲ್ಲಿ ಹಾಜರಿರುತ್ತಿದ್ದರೇ? ಅವರು ಗೈರಾಗಿರಲಿಲ್ಲವೇ? ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಮಾಡಬಾರದನ್ನು ಮಾಡಿರುವುದಕ್ಕೇ ಜನ ನಮ್ಮನ್ನು ಇಲ್ಲಿ ಕೂರಿಸಿ, ನಿಮ್ಮನ್ನು ಅಲ್ಲಿ ಕೂರಿಸಿ ತೀರ್ಪು ಕೊಟ್ಟಿದ್ದಾರೆ” ಎಂದು ಹರಿಹಾಯ್ದರು.

“ನನ್ನ ಹೆಸರು ಹೇಳಿ ಆಪಾದನೆ ಮಾಡಲಾಗಿದೆ, ಸಾಕ್ಷಿ ನೀಡಬೇಕು” ಎಂದು ಅಶ್ವತ್ಥ್ ನಾರಾಯಣ ಹೇಳಿದಾಗ “ಮಾಡಬಾರದ್ದು ಮಾಡಿರುವ ನಿಮ್ಮದನ್ನು ತೆಗೆಯುತ್ತೇವೆ, ಮಾತನಾಡುತ್ತೇವೆ ತಡೆಯಿರಿ” ಎಂದು ಗುಡುಗಿದರು.


Spread the love

About Laxminews 24x7

Check Also

ಡ್ರಂಕ್​​ & ಡ್ರೈವ್:​ 36 ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು

Spread the love ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನಗಳನ್ನು ಓಡಿಸುವ​ ಚಾಲಕರ ವಿರುದ್ಧ ನಗರ ಪಶ್ಚಿಮ ವಿಭಾಗದ ಪೊಲೀಸರು ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ