Breaking News

7ನೇ ವೇತನ ಆಯೋಗ ವರದಿ ಜಾರಿ : ಸರಕಾರಿ ನೌಕರರ ವೇತನದಲ್ಲಿ ಎಷ್ಟು ಹೆಚ್ಚಳ ?

Spread the love

ಬೆಂಗಳೂರು : ಕರ್ನಾಟಕ ಸರಕಾರ ಕೊನೆಗೂ ಸರಕಾರಿ ನೌಕರರ ಬೇಡಿಕೆಯನ್ನು ಈಡೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ (7th Pay Commission) ದ ವರದಿ ಜಾರಿಗೆ ಸಚಿವ ಸಂಪುಟ ಅಸ್ತು ಎಂದಿದೆ.

ಹಾಗಾದ್ರೆ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಯಿಂದ ಸರಕಾರಿ ನೌಕರರ ವೇತನದಲ್ಲಿ ಎಷ್ಟು ಹೆಚ್ಚಳವಾಗಲಿದೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.7ನೇ ವೇತನ ಆಯೋಗ ವರದಿ ಜಾರಿ : ಸರಕಾರಿ ನೌಕರರ ವೇತನದಲ್ಲಿ ಎಷ್ಟು ಹೆಚ್ಚಳ ? ಇಲ್ಲಿದೆ ಸಂಪೂರ್ಣ ಮಾಹಿತಿ

ಕೆ.ಸುಧಾಕರ್‌ ರಾವ್‌ ನೇತೃತ್ವದ 7ನೇ ವೇತನ ಆಯೋಗವು ತನ್ನ ವರದಿಯನ್ನು ಕಳೆದ ಮಾರ್ಚ್‌ 16ರಂದು ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾಡಿತ್ತು. ವೇತನ ಆಯೋಗ ಸಲ್ಲಿಕೆ ಮಾಡಿರುವ ವರದಿಯಲ್ಲಿ ಹಲವು ಶಿಫಾರಸ್ಸುಗಳನ್ನು ಮಾಡಿದೆ. ಪ್ರಮುಖವಾಗಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ವೇತನದಲ್ಲಿ ಶೇ.27.5ರಷ್ಟು ಹೆಚ್ಚಳ ಮಾಡುವಂತೆ ಶಿಫಾರಸ್ಸು ಮಾಡಿದೆ. ಈ ಮೂಲಕ ಸರಕಾರಿ ನೌಕರರ ಕನಿಷ್ಠ ಮೂಲ ವೇತನ ಡಿಎ ಸೇರಿದಂತೆ ಒಟ್ಟು 17000 ದಿಂದ 27000 ಕ್ಕೆ ಏರಿಕೆಯಾಗಲಿದೆ.

 Image Credit to Original Sourceರಾಜ್ಯ ಸರಕಾರ ಈಗಾಗಲೇ ಮಧ್ಯಂತರ ಪರಿಹಾರವನ್ನು ಘೋಷಣೆ ಮಾಡಿದ್ದು, 2023 ರಿಂದಲೇ ಸರಕಾರಿ ನೌಕರರು ಮಧ್ಯಂತರ ಪರಿಹಾರವನ್ನು ಪಡೆದುಕೊಂಡಿದ್ದಾರೆ. ಕಳೆದ ಮಾರ್ಚ್‌ ತಿಂಗಳಿನಲ್ಲೇ 7ನೇ ವೇತನ ಆಯೋಗ ವರದಿ ಜಾರಿಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಅಗಸ್ಟ್‌ ತಿಂಗಳಿನಿಂದ ವೇತನ ಹೆಚ್ಚಳವಾಗಲಿದೆ. ಇದರಿಂದಾಗಿ ಸರಕಾರಿ ನೌಕರರು ಸುಮಾರು 5 ತಿಂಗಳ ಏರಿಯರ್ಸ್‌ ಅನ್ನು ಕಳೆದುಕೊಳ್ಳಲಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ