Breaking News

KSRTC ಬಸ್​ ಚಾಲಕನ ರೀಲ್ಸ್​ ಶೋಕಿಗೆ ಎತ್ತುಗಳು ಬಲಿ, ರೈತನ ಸ್ಥಿತಿ ಗಂಭೀರ

Spread the love

ಹುಬ್ಬಳ್ಳಿ: ಇತ್ತೀಚಿನ ವರ್ಷಗಳಲ್ಲಿ ಜನರ ರೀಲ್ಸ್​ ಹುಚ್ಚಾಟಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಭರದಲ್ಲಿ ಒಂದಿಲ್ಲೊಂದು ಕೆಲಸಕ್ಕೆ ಕೈ ಹಾಕಿ ಜನರು ಇನ್ನಿಲ್ಲದ ಪೇಚಿಗೆ ಸಿಲುಕುತ್ತಾರೆ. ಇದೀಗ ಹುಬ್ಬಳ್ಳಿಯಲ್ಲಿ KSRTC ಚಾಲಕನೋರ್ವ ಬಸ್​ ಚಾಲನೆ ವೇಳೆ ರೀಲ್ಸ್​ ಮಾಡಲು ಹೋಗಿ ಎರಡು ಎತ್ತು ಹಾಗೂ ರೈತನ ಜೀವಕ್ಕೆ ಕುತ್ತು ತಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿ ನಡೆದಿದೆ.

 

 

 

ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ಬಸ್​ನಲ್ಲಿ ಚಾಲಕ ರೀಲ್ಸ್​ ಮಾಡಲು ಶುರು ಮಾಡಿದ್ದಾನೆ. ಬಸ್​ ಚಾಲನೆ ವೇಳೆ ಸಂಪೂರ್ಣವಾಗಿ ರೀಲ್ಸ್​ನಲ್ಲಿ ಮುಳುಗಿದ್ದ ಚಾಲಕನು ಮುಂದೆ ಹೋಗುತ್ತಿದ್ದ ಎತ್ತಿನಗಾಡಿಯನ್ನು ಗಮನಿಸದೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ಎತ್ತುಗಳು ಸ್ಥಳದಲ್ಲೇ ಮೃತಪಟ್ಟಿದ್ದು, ರೈತನಿಗೆ ಗಂಭೀರ ಗಾಯವಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ