Breaking News

ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಕ್ಯಾಮ್​; ಮಾಜಿ ಸಚಿವ ನಾಗೇಂದ್ರ ಪತ್ನಿ ED ವಶಕ್ಕೆ

Spread the love

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದಿದ್ದಾರೆ.

ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 10ರಂದು ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಂಗ್ರೆಸ್​ ಶಾಸಕ ಬಸನ್​ಗೌಡ ದದ್ದಲ್​ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದರು

ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಕ್ಯಾಮ್​; ಮಾಜಿ ಸಚಿವ ನಾಗೇಂದ್ರ ಪತ್ನಿ ED ವಶಕ್ಕೆ

.ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಹೆಚ್ಚಿನ ವಿಚಾರಣೆಯ ಅಗತ್ಯವಿರುವ ಕಾರಣ ಅಧಿಕಾರಿಗಳು ಆರೋಪಿಗಳ ಹೇಳಿಕೆ ಆಧರಿಸಿ ಈ ಕ್ರಮ ಕೈಗೊಂಡಿದ್ದಾರೆ. ಮಂಜುಳಾರನ್ನು ಡಾಲರ್ಸ್​ ಕಾಲೋನಿ ನಿವಾಸದಲ್ಲಿ ವಶಕ್ಕೆ ಪಡೆದ ನಂತರ ಅವರನ್ನು ಅಧಿಕಾರಿಗಳು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ