Breaking News

270ಕ್ಕೂ ಹೆಚ್ಚು ನಕಲಿ ಖಾತೆ ಸೃಷ್ಟಿಸಿ ಅವ್ಯವಹಾರ: ಪೊಲೀಸ್ ಬಲೆಗೆ ಸೈಬರ್ ವಂಚಕರು

Spread the love

ಹುಬ್ಬಳ್ಳಿ: ಸೈಬರ್ ವಂಚಕರ ಜಾಲವನ್ನು ಪತ್ತೆ ಮಾಡಿರುವ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆ ಪೊಲೀಸರು, ದೆಹಲಿಯಲ್ಲಿ ಇಬ್ಬರು ಮತ್ತು ಮುಂಬೈಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೊಬೈಲ್, ಲ್ಯಾಪ್‌ಟಾಪ್ ಸೇರಿ ಕೆಲ ದಾಖಲೆ ವಶಪಡಿಸಿಕೊಂಡು, ಕೆಲ ಬ್ಯಾಂಕ್‌ಗಳ ಖಾತೆಗಳನ್ನು ನಿಷ್ಕ್ರಿಯಗೊಳಿಸಿ ₹ 60 ಲಕ್ಷ ಬಳಕೆಯನ್ನು ತಡೆ ಹಿಡಿದಿದ್ದಾರೆ.

 

ದೆಹಲಿಯ ನಿಖಿಲಕುಮಾರ್‌ ರೌನಿ ಮತ್ತು ಸಚಿನ್‌ ಬೋಲಾ ಹಾಗೂ ಮುಂಬೈಯ ನಿಗಮ್ ಬಂಧಿತ ಆರೋಪಿಗಳು. ಮೂವರನ್ನು ಹುಬ್ಬಳ್ಳಿಗೆ ಕರೆ ತಂದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

‘ಇಬ್ಬರು ಆರೋಪಿಗಳು ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿದ್ದು, ಡಾರ್ಕ್‌ನೆಟ್‌ಲ್ಲಿ ಸಕ್ರಿಯರಾಗಿ ಕೋಡಿಂಗ್ ಮತ್ತು ಡಿ-ಕೋಡಿಂಗ್ ಮಾಡುವಲ್ಲಿ ಪರಿಣತರು. ಈ ಹಿಂದೆ ಐಟಿ ಕಂಪನಿಯಲ್ಲಿ ಕೆಲಸ ಮಾಡಿ, ಹೊರಬಂದವರು. ಇನ್ನೊಬ್ಬ ಆರೋಪಿ ಬಟ್ಟೆ ವ್ಯಾಪಾರಿ. ಈ ಮೂವರು ಕರ್ನಾಟಕ ಸೇರಿ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮಹಾರಾಷ್ಟ್ರ, ಅಸ್ಸಾಂ, ಮಧ್ಯಪ್ರದೇಶ, ತಮಿಳುನಾಡು, ದೆಹಲಿ ಹಾಗೂ ಇತರ ರಾಜ್ಯಗಳಲ್ಲಿ ಸಂಪರ್ಕ ಜಾಲ ವಿಸ್ತರಿಸಿಕೊಂಡು, ಆನ್‌ಲೈನ್ ಮೂಲಕ ವಂಚಿಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಹಂತದ ತನಿಖೆ ಪ್ರಕಾರ, ಸಾರ್ವಜನಿಕರನ್ನು ವಂಚಿಸಿ ಗಳಿಸಿದ ಹಣವನ್ನು ಆರೋಪಿಗಳು ಸರ್ಕಾರಿ ಮತ್ತು ಖಾಸಗಿಯ ವಿವಿಧ ಬ್ಯಾಂಕ್‌ಗಳ 37 ಖಾತೆಗಳಿಗೆ ವರ್ಗಾಯಿಸಿಕೊಳ್ಳುತ್ತಿದ್ದರು. ಅದನ್ನು ದೇಶದ ವಿವಿಧ ಬ್ಯಾಂಕ್‌ಗಳಲ್ಲಿನ 270ಕ್ಕೂ ನಕಲಿ ಖಾತೆಗೆ ವರ್ಗಾಯಿಸಿಕೊಂಡು, ಡ್ರಾ ಮಾಡಿಕೊಳ್ಳುತ್ತಿದ್ದರು. ಒಂದು ಖಾತೆಯಿಂದ ಮತ್ತೊಂದು ಖಾತೆಗೆ ಅಂದಾಜು ನೂರಾರು ಕೋಟಿಗೂ ಅಧಿಕ ಹಣ ವರ್ಗಾವಣೆಯಾದ ಬಗ್ಗೆ ಶಂಕೆಯಿದೆ.


Spread the love

About Laxminews 24x7

Check Also

ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ: 17 ಲಕ್ಷ ರೂ. ಪ್ರವೇಶ ಶುಲ್ಕ ಸಂಗ್ರಹ

Spread the loveಬೆಳಗಾವಿ: ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಅಮೃತಹಸ್ತದಿಂದ ಕಿತ್ತೂರಿನಲ್ಲಿ ಉದ್ಘಾಟನೆಗೊಂಡ “ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ