Breaking News

ಚಿಕ್ಕೋಡಿ‌ | ಸಮಸ್ಯೆಗಳ ಆಗರದಲ್ಲಿ ಸರ್ಕಾರಿ ಪಾಲಿಟೆಕ್ನಿಕ್: ವಿದ್ಯಾರ್ಥಿಗಳ ಪರದಾಟ

Spread the love

ಚಿಕ್ಕೋಡಿ: ₹8 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಆದರೆ, ಆವರಣ ಗೋಡೆಯೇ ಇಲ್ಲ. ಬೋಧನೆಗೆ ಕಾಯಂ ಉಪನ್ಯಾಸಕರಿಲ್ಲ. ಕೊಳವೆಬಾವಿ ಇದ್ದರೂ, ಶುದ್ಧ ಕುಡಿಯುವ ನೀರಿನ ಘಟಕವಿಲ್ಲ. ಕಾಲೇಜಿಗೆ ಬರಲು ಸರಿಯಾಗಿ ಬಸ್‌ ವ್ಯವಸ್ಥೆಯೂ ಇಲ್ಲ.

ಹೀಗೆ ಸಾಲು ಸಾಲು ಸಮಸ್ಯೆಗಳಿಂದ ತಾಲ್ಲೂಕಿನ ಸದಲಗಾ ಹೊರವಲಯದ ಸರ್ಕಾರಿ ಪಾಲಿಟೆಕ್ನಿಕ್ ಬಳಲುತ್ತಿದೆ.

ಸ್ಥಳೀಯ ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಪ್ರಯತ್ನದಿಂದ ಇಲ್ಲಿ ಸುಸಜ್ಜಿತ ಕಟ್ಟಡ ತಲೆ ಎತ್ತಿ, ಮೂರು ವರ್ಷ ಕಳೆದಿದೆ. ಆದರೆ, ಕನಿಷ್ಠ ಮೂಲಸೌಕರ್ಯವೂ ಇಲ್ಲದಿರುವುದು ವಿದ್ಯಾರ್ಥಿಗಳ ನಿರಾಸೆಗೆ ಕಾರಣವಾಗಿದೆ.

ಇಲ್ಲಿ ಕಂಪ್ಯೂಟರ್ ಸೈನ್ಸ್, ಸಿವಿಲ್ ವಿಭಾಗದ ಡಿಪ್ಲೊಮಾ ಕೋರ್ಸ್‌ಗಳಿದ್ದು, 193 ವಿದ್ಯಾರ್ಥಿಗಳು ಇದ್ದಾರೆ. ಕಲಿಕೆಗಾಗಿ ಚಿಕ್ಕೋಡಿ, ಸದಲಗಾ, ನಿಪ್ಪಾಣಿ, ಬೇಡಕಿಹಾಳ, ಯಕ್ಸಂಬಾ, ಬೋರಗಾಂವ ಮತ್ತಿತರ ಕಡೆಯಿಂದ ಅವರು ಆಗಮಿಸುತ್ತಿದ್ದಾರೆ.

ಬೆಳಿಗ್ಗೆ 9ಕ್ಕೆ ತರಗತಿ ಆರಂಭವಾಗುತ್ತವೆ. ಈ ಕಾಲೇಜು ಮಾರ್ಗವಾಗಿ ಕಾರ್ಯಾಚರಣೆ ನಡೆಸುವ ಬಸ್‌ 9.30ಕ್ಕೆ ಚಿಕ್ಕೋಡಿಯಿಂದ ಹೊರಡುತ್ತದೆ. ಅದು 10.30ಕ್ಕೆ ಕಾಲೇಜು ತಲುಪುತ್ತದೆ. ಹಾಗಾಗಿ ಸಕಾಲಕ್ಕೆ ತರಗತಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಆಗುತ್ತಿಲ್ಲ.

ತರಗತಿ ಅವಧಿಗೆ ಪೂರಕವಾಗಿ ಬಸ್‌ ವ್ಯವಸ್ಥೆ ಇಲ್ಲದ್ದರಿಂದ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಕಾಲೇಜು ತಲುಪಲು ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ಇದೇ ಮಾರ್ಗದಲ್ಲಿ ಸಂಚರಿಸುವವರ ಬೈಕ್‌ಗಳ ನೆರವಿನಿಂದ ನೇಜ್‌ ಕ್ರಾಸ್, ಸದಲಗಾ ಕ್ರಾಸ್, ನಣದಿ ಕ್ರಾಸ್, ವಡಗೋಲ ಕ್ರಾಸ್‌ವರೆಗೆ ಬಂದು, ಅಲ್ಲಿಂದ ಕಾಲ್ನಡಿಗೆ ಮೂಲಕ ಬೆಟ್ಟ-ಗುಡ್ಡ, ಹೊಲಗಳನ್ನು ದಾಟಿ ಕಾಲೇಜಿಗೆ ಬರಬೇಕಾದ ಅನಿವಾರ್ಯತೆ ಇದೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ