ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತ ನಟ ದರ್ಶನ್, ಸ್ನೇಹಿತೆ ಪವಿತ್ರಾ ಗೌಡ ಸೇರಿ ಇತರ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಗುರುವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದಲೇ ದರ್ಶನ್ ಮತ್ತು ಇತರ ಆರೋಪಿಗಳನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್‌ಗೆ ಹಾಜರುಪಡಿಸಿದರು.
ವಿಚಾರಣೆ ನಡೆಸಿದ ನ್ಯಾಯಾಂಗ, ಆಗಸ್ಟ್ 1ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.