ನಾಗೇಂದ್ರ ಮತ್ತೆ 5 ದಿನ ಇ.ಡಿ. ವಶಕ್ಕೆ

Spread the love

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಬಂಧಿತರಾಗಿ ರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಯವು ಮತ್ತೆ 5 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಇಡಿ) ವಶಕ್ಕೆ ನೀಡಿದೆ.

ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಅವಧಿಯು ಗುರುವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್‌ ಇನ್ನೂ ವಿಚಾರಣೆ ಬಾಕಿ ಇರುವುದರಿಂದ 8 ದಿನಗಳ ಕಾಲ ಇ.ಡಿ. ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ನ್ಯಾಯಾಲಯವು 5 ದಿನ (ಜುಲೈ 22) ಇ.ಡಿ. ವಶಕ್ಕೆ ಒಪ್ಪಿಸಿದೆ. ಈವರೆಗಿನ ತನಿಖಾ ಮಾಹಿತಿಯ ದಾಖಲೆಗಳನ್ನು ಇ.ಡಿ. ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಸಿದರು.

 


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ