ಬೆಂಗಳೂರು: ಅಂಕೋಲಾದ ಶಿರೂರಿನ ಗುಡ್ಡ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ( ಎನ್‌ಎಚ್‌ಎ) ಬೇಜವಾಬ್ದಾರಿಯೇ ಕಾರಣ’ ಎಂದು ಆರೋಪಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಾಧಿಕಾರ ಮತ್ತು ಐಆರ್‌ಬಿ ಕಂಪೆನಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಾಗಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಡ್ಡ ಕುಸಿತ ಆಗಬಹುದು ಎಂಬ ಬಗ್ಗೆ ಕಳೆದ ವರ್ಷವೇ ಮಾಹಿತಿ ನೀಡಿದ್ದೆವು. ಆದರೆ ಗುಡ್ಡ ಕುಸಿತ ತಡೆಗಟ್ಟುವ ಕೆಲಸ ಅವರು ಮಾಡಿಲ್ಲ. ಬುಧವಾರವೂ ತ್ವರಿತವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸ್ಪಂದಿಸಲಿಲ್ಲ. ರಾಷ್ಟ್ರೀಯ ಹೆದ್ದಾರಿಯವರು ಸರಿಯಾಗಿ ಪ್ರತಿಕ್ರಿಯೆ ನೀಡಲಿಲ್ಲ ಎಂದು ಸ್ಥಳೀಯ ಶಾಸಕರು ದೂರು ನೀಡಿದ್ದಾರೆ.
ಬುಧವಾರ ಸಂಜೆ ಐಆರ್‌ಬಿ ಕಂಪೆನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೇಲೆ ಎಫ್‌ಐಆರ್ ದಾಖಲು ಮಾಡಿದ್ದೇವೆ. ಈ ಪ್ರಕರಣಕ್ಕೆ ಅವರ ಬೇಜವಾಬ್ದಾರಿ, ಮೊಂಡುತನ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.