Breaking News

ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ವಿಶೇಷ ರೈಲು ಸಂಚಾರ

Spread the love

ಬೆಂಗಳೂರು: ಗುಡ್ಡ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಎರಡು ಮುಖ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಸ್ ಸಂಚಾರ ವ್ಯತ್ಯಯವಾಗಿರುವ ಹಿನ್ನಲೆ, ಜನರ ಅನುಕೂಲಕ್ಕಾಗಿ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ನೈಋತ್ಯ ರೈಲ್ವೆ ಮುಂದಾಗಿದೆ.

ರೈಲು ಸಂಖ್ಯೆ 06547 ಜುಲೈ 19 ರಂದು ರಾತ್ರಿ 11 ಗಂಟೆಗೆ ಕೆಎಸ್‌ಆರ್ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 11:40 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ಈ ರೈಲು ಬೆಂಗಳೂರು ಕಂಟೋನ್ಮೆಂಟ್, ಎಸ್‌ಎಂವಿಟಿ ಬೆಂಗಳೂರು, ಚಿಕ್ಕಬಾಣಾವರ, ನೆಲಮಂಗಲ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಮತ್ತು ಕಬಕ-ಪುತ್ತೂರು, ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ರೈಲು ಸಂಖ್ಯೆ 06548 ಜುಲೈ 20 ರಂದು ಮಧ್ಯಾಹ್ನ 1:40 ಕ್ಕೆ ಮಂಗಳೂರು ಜಂಕ್ಷನ್ ನಿಂದ ಹೊರಟು, ಅದೇ ದಿನ ರಾತ್ರಿ 11:15 ಗಂಟೆಗೆ ಯಶವಂತಪುರ ಆಗಮಿಸಲಿದೆ. ಈ ರೈಲು ಬಂಟ್ವಾಳ, ಕಬಕ-ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ನೆಲಮಂಗಲ, ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ರೈಲು ಸಂಖ್ಯೆ 06549 ಜುಲೈ 21 ಮತ್ತು 22, 2024 ರಂದು ಮಧ್ಯರಾತ್ರಿ 12:30 ಗಂಟೆಗೆ ಯಶವಂತಪುರದಿಂದ ಹೊರಟು, ಅದೇ ದಿನ ಬೆಳಿಗ್ಗೆ 11:40ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಮತ್ತು ಕಬಕ-ಪುತ್ತೂರು, ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ