Breaking News

ಗೋಕಾಕ- ಶಿಂಗಳಾಪುರ ಸೇತುವೆ ಮುಳುಗಡೆ

Spread the love

ಗೋಕಾಕ: ಘಟಪ್ರಭಾ ನದಿಯ ಹಿನ್ನೀರಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹದಲ್ಲಿ ಏರಿಕೆ ಉಂಟಾಗುತ್ತಿರುವ ಪರಿಣಾಮ ಗೋಕಾಕ-ಶಿಂಗಳಾಪುರ ಸೇತುವೆ ಶುಕ್ರವಾರ ಸಂಜೆ ಪ್ರವಾಹದಲ್ಲಿ ಮುಳುಗಡೆ ಆಗಿದೆ.

ಬ್ರಿಜ್‌ ಕಂ ಬ್ಯಾರೇಜ್ ಪ್ರವಾಹದಲ್ಲಿ ಮುಳುಗಿದ್ದರಿಂದ ಶಿಂಗಳಾಪುರ ಮತ್ತು ಟಕ್ಕೆ ನಿವಾಸಿಗಳು ಅಪಾಯವನ್ನೂ ಲೆಕ್ಕಿಸದೇ ಪ್ರವಾಹದ ಮಧ್ಯೆಯೇ ಸೇತುವೆ ದಾಟುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ನಿರಂತರ ಮಳೆ: ಗೋಕಾಕ- ಶಿಂಗಳಾಪುರ ಸೇತುವೆ ಮುಳುಗಡೆ

ಈ ಹಿನ್ನೆಲೆಯಲ್ಲಿ ತಹಶೀಲ್ದಾರ ಮೋಹನ ಭಸ್ಮೆ ಸ್ಥಳಕ್ಕೆ ಭೇಟಿ ನೀಡಿದರು. ಪೊಲೀಸ್ ಬಂದೋಬಸ್ತ್‌ ಕಲ್ಪಿಸಲು ಗೋಕಾಕ ಶಹರ ಮತ್ತು ಘಟಪ್ರಭಾ ಪೊಲೀಸರಿಗೆ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ