ಜು.20-ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಜುಲೈ ಒಂದರಿಂದ ಇದುವರೆಗೆ ವಾಡಿಕೆಗಿಂತ ಶೇ.50ರಷ್ಟು ಹೆಚ್ಚು ಮಳೆಯಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಹವಾಮಾನ ಮುನ್ಸೂನೆಗಳಿವೆ. ಕರಾವಳಿ ಜಿಲ್ಲೆಗಳಿಗೆ ಇಂದೂ ಕೂಡ ರೆಡ್ ಅಲರ್ಟ್ ನೀಡಲಾಗಿದ್ದು, ನಾಳೆಯಿಂದ ಮೂರು ದಿನಗಳ ಆರೆಂಜ್ ಅಲರ್ಟ್‍ನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಮಲೆನಾಡು ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯಲಿದ್ದು, ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನಲ್ಲಿ ಎಂದಿನಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.