Breaking News

ಬೆಳಗಾವಿ | 2 ವರ್ಷದ ಮಗುವಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ

Spread the love

ಬೆಳಗಾವಿ: ಬಡತನದಿಂದ ಬಳಲುತ್ತಿದ್ದ ಎರಡು ವರ್ಷದ ಹೆಣ್ಣು ಮಗುವಿನ ಹೃದಯ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲು ರೋಟರಿ ಕ್ಲಬ್ ಆಫ್ ಬೆಳಗಾವಿ ದಕ್ಷಿಣ ಪದಾಧಿಕಾರಿಗಳು ‘ಗಿಫ್ಟ್‌ ಆಫ್ ಲೈಫ್’ ಯೋಜನೆಯಡಿ ಆರ್ಥಿಕವಾಗಿ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ನೀಲೇಶ ಪಾಟೀಲ, ಭೂಷಣ ಮೋಹಿತೆ, ಚೈತನ್ಯ ಕುಲಕರ್ಣಿ, ಆರತಿ ಅಂಗಡಿ ಮತ್ತಿತರ ಪದಾಧಿಕಾರಿಗಳು ಶನಿವಾರ ಕೆಎಲ್‌ಇ ಆಸ್ಪತ್ರೆಗೆ ಭೇಟಿ ನೀಡಿ, ಮಗುವಿನ ಆರೋಗ್ಯ ವಿಚಾರಿಸಿದರು.

‘ಮುಂದೆಯೂ ನಾವು ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತೇವೆ’ ಎಂದು ಭರವಸೆ ನೀಡಿದರು.

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆಗೆ ದಾಖಲಾಗಿದ್ದ ಸವದತ್ತಿ ತಾಲ್ಲೂಕಿನ ಕುಟರನಟ್ಟಿಯ ಹನುಮಂತ ಸರ್ವಿ ಅವರ ಮಿದುಳು ನಿಷ್ಕ್ರಿಯಗೊಂಡಿತ್ತು. ಅವರು ತಮ್ಮ ಅಂಗಾಂಗ ದಾನ ಮಾಡಿ ಇಬ್ಬರ ಜೀವ ಉಳಿಸಿದ್ದರು. ಆದರೆ, ಪತಿ ಕಳೆದುಕೊಂಡು ಗರ್ಭಿಣಿ ಪತ್ನಿ ಸಂಕಷ್ಟಕ್ಕೆ ಸಿಲುಕಿದ್ದರು.

ಹನುಮಂತ ಮೃತಪಟ್ಟ ಕೆಲ ದಿನಗಳಲ್ಲೇ ಎರಡು ವರ್ಷದ ಮಗಳಿಗೆ ಆರೋಗ್ಯ ಸಮಸ್ಯೆ ಕಾಡಿತು. ಕೆಎಲ್‌ಇ ಆಸ್ಪತ್ರೆಯ ಚಿಕ್ಕಮಕ್ಕಳ ಹೃದ್ರೋಗ ತಜ್ಞ ಡಾ.ವೀರೇಶ ಮಾನ್ವಿ ತಪಾಸಣೆಗೆ ಒಳಪಡಿಸಿದಾಗ, ಮಗುವಿನ ಹೃದಯದಲ್ಲಿ ರಂದ್ರ ಇರುವುದು ಕಂಡುಬಂತು. ಇದಕ್ಕೆ ಶಸ್ತ್ರಚಿಕಿತ್ಸೆ ಅನಿವಾರ್ಯ ಎಂದು ಅವರು ತಿಳಿಸಿದಾಗ, ಕುಟುಂಬ ಆಘಾತಕ್ಕೆ ಒಳಗಾಯಿತು.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ