Breaking News

ಕುರಿ, ಮೇಕೆಗಳಿಗೆ ಜಂತುನಾಶಕ ಔಷಧ ವಿತರಣೆ

Spread the love

ಬೈಲಹೊಂಗಲ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಕುರಿಗಾರರು ನೆಲೆಸಿದ ಸ್ಥಳಗಳಿಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಹಾಗೂ ಮುಖ್ಯ ಪಶುವೈಧ್ಯಾಧಿಕಾರಿ ಡಾ.ಶ್ರೀಕಾಂತ ಗಾಂವಿ ಅವರು ಕುರಿಗಳಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಔಷಧಗಳನ್ನು ವಿತರಿಸಿದರು.

 

ಪಶು ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿತರಿಸುವ ಔಷಧೋಪಚಾರಗಳನ್ನು ಕಡ್ಡಾಯವಾಗಿ ಪಡೆದುಕೊಂಡು ಪ್ರಸ್ತುತ ದಿನಗಳಲ್ಲಿ ಕುರಿ ಮತ್ತು ಆಡುಗಳಿಗೆ ಹಲವಾರು ರೀತಿಯ ಕಾಯಿಲೆಗಳು, ಕಾಲುಬೆನಿ ಮತ್ತು ಸಾಂಕ್ರಮಿಕ ರೋಗಗಳು ಹರಡದಂತೆ ಎಚ್ಚರವಹಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ಕುರಿ ತಳಿಗಳನ್ನು ಅಭಿವೃದ್ಧಿ ಪಡಿಸಿಕೊಂಡು ಸ್ವಾವಲಂಭಿ ಬದುಕು ಕಟ್ಟಿಕೊಳ್ಳಬೇಕು ಎಂದರು.

ಗ್ರಾಮೀಣ ಪ್ರದೇಶ ಕುರಿಗಾಯಿಗಳಿಗೆ ನರೇಗಾ ಯೋಜನೆಯಲ್ಲಿ ಸಮುದಾಯ, ವೈಯಕ್ತಿಕ ಆಡು, ಕುರಿ ಶೆಡ್ಡ್‌ ಗಳನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿರುತ್ತದೆ. ಅದನ್ನು ಸದುಪಯೋಗ ಪಡೆಸಿಕೊಂಡು ಕುರಿ ಸಂತತಿಯನ್ನು ಅಭಿವೃದ್ಧಿ ಪಡಿಸಿರಿ ಇಒ ಸುಭಾಷ ಸಂಪಗಾವಿ ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ