Breaking News

ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌

Spread the love

ರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ, ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

 

2025ರ ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕಾರ್ಮಿಕರ ಮಾಸಿಕ ವೇತನ ರೂ.35,000/- ಗಿಂತ ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾಥಿಗಳು ಆನ್‍ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‍ಸೈಟ್ ನಲ್ಲಿ WWW.klwbapps.karnataka.gov.inಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 080-23475188, 8277291175, 8277120505, 9141585402, 9141602562 ಮೂಲಕ ಸಂಪರ್ಕಿಸಬಹುದಾಗಿದೆ


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ