ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮೇಲೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಅದರಂತೆ ಒಂದೊಂದೇ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿತ್ತು.
ಆದರೆ ಈ ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆವರೆಗೆ ಉತ್ತಮವಾಗಿಯೇ ಜಾರಿಯಾಗಿದ್ದವು.
ಲಕ್ಷಾಂತರ ಜನ ಮಹಿಳೆಯರು ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಗೃಹಜ್ಯೋತಿಯಡಿ ಉಚಿತ ವಿದ್ಯುತ್, ಅನ್ನಭಾಗ್ಯ ಹಾಗೂ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಂಡಿದ್ದರು.
ಗ್ಯಾರಂಟಿ ಯೋಜನೆಗಳ ಲಾಭ ಪಡೆದುಕೊಂಡರು ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಕೈಕೊಟ್ಟಿದ್ದರು.
ಇದೇ ಕಾರಣಕ್ಕೂ ಏನೋ ಲೋಕಸಭಾ ಚುನಾವಣೆ ಬಳಿಕ ಮನೆಯ ಯಜಮಾನಿಯರ ಖಾತೆಗೆ 2 ಸಾವಿರ ರೂ. ಗೃಹಲಕ್ಷ್ಮಿ ಹಣ ಬಂದಿಲ್ಲ.
ಹೀಗಾಗಿ ಪ್ರತಿದಿನವೂ ಹಣ ಬರದ ಮಹಿಳೆಯರು ಬ್ಯಾಂಕಿಗೆ ಎಡತಾಕುವಂತಾಗಿದೆ. ಇಂದು ಬರುತ್ತೆ, ನಾಳೆ ಬರುತ್ತೆ ಅಂತಾ ಲಕ್ಷಾಂತರ ಮಹಿಳೆಯರು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.