Breaking News

ಜಾಂಬೋಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

Spread the love

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಜಾಂಬೋಟಿಯಿಂದ ಬೆಳಗಾವಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಶನಿವಾರದಿಂದ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ- ಜಾಂಬೋಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಜಾಂಬೋಟಿಯಿಂದ ಬೆಳಗಾವಿ ನಗರಕ್ಕೆ ಸಂಪರ್ಕ ಕಲ್ಪಿಸುವ ಜಾಂಬೋಟಿ- ಪೀರಣವಾಡಿ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ- 54) ಕುಸಮಳಿ ಗ್ರಾಮದ ಹತ್ತಿರದ ಸೇತುವೆ ಹಳೆಯದಾಗಿದೆ. ಇದು ಸಂಚಾರಕ್ಕೆ ಯೋಗ್ಯವಾಗಿಲ್ಲ. ಅಲ್ಲದೇ ಜಾಂಬೋಟಿಯಿಂದ ಖಾನಾಪುರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಕೂಡ ಭಾರಿ ವಾಹನಗಳ ಸಂಚಾರಕ್ಕೆ ಸೂಕ್ತವಿಲ್ಲ. ಎರಡೂ ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರವನ್ನು ಮುಂದಿನ ಆದೇಶದ ವರೆಗೆ ನಿರ್ಭಂದಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ