ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಯಮಕನಮರಡಿ, ನಿಪ್ಪಾಣಿ, ಚಿಕ್ಕೋಡಿ, ಗೋಕಾಕ ಭಾಗದ 10 ಸೇತುವೆಗಳು ಜಲಾವೃತಗೊಂಡಿವೆ.
ಯಮಕನಮರಡಿ ವರದಿ: ಮಹಾ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಹುಕ್ಕೇರಿ ತಾಲ್ಲೂಕಿನ ದಡ್ಡಿ, ಸಲಾಮವಾಡಿ, ಮೊದಗಾ, ಶೆಟ್ಟಿಹಳ್ಳಿ ಗ್ರಾಮದ ನಾಲ್ಕು ಸೇತುವೆಗಳು ಶನಿವಾರ ಮುಳುಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ.

‘ನದಿ ದಡದ ನಿವಾಸಿಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ. ಸೇತುವೆ ಮೇಲೆ ಜನರು ಓಡಾಡದಂತೆ ತಡೆಯಲು ಪೊಲೀಸರು ಬ್ಯಾರಿಕೇಡ್ ಇಟ್ಟಿದ್ದು, ನಿಗಾ ವಹಿಸಿದ್ದಾರೆ’ ಎಂದು ಸಲಾಮವಾಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ ಕಬ್ಬಗೋಳ ತಿಳಿಸಿದರು.
Laxmi News 24×7