ಅಂಕಲಗಿ ಗ್ರಾಮದಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಓರ್ವ ಸಾವು

Spread the love

ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಓರ್ವ ಸಾವು

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ, ಅಡಿವೆಪ್ಪನ ಮಠದ ಮುಂಭಾಗದ ರಸ್ತೆಯಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ವರ್ಷದ ಅನೀಲ್ ಬಿಚಗತ್ತಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಬೈಕ್ ಹಿಂಬದಿ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಲ್ಮೆಟ್ ಧರಿಸದೆ ಇದ್ದುದರಿಂದ ಅನೀಲ್ ತಲೆಗೆ ಗಂಭೀರ ಗಾಯಗಳಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಸ್ಥಳಕ್ಕೆ ಅಂಕಲಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

About Laxminews 24x7

Check Also

ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ

Spread the love ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ ಘಟಪ್ರಭಾ:2023-24,2024-25 ನೇ ಸಾಲಿನ ನಗರಸಭೆ ನಿಧಿಯ ಶೇ.24.10 ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ