Breaking News

ಉದ್ಯೋಗ’ ಸಿಗದೆ ಕೂಲಿ ಕೆಲಸ ಮಾಡುತ್ತಿದ್ದಾರೆ ಎಂಎಸ್ಸಿ ಪದವೀಧರೆ.!

Spread the love

ದಾವಣಗೆರೆ :ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ವಿದ್ಯೆಗೆ ತಕ್ಕ ಹುದ್ದೆ ಸಿಕ್ಕುವುದು ಮರೀಚಿಕೆಯಾಗಿದೆ. ಅದರಲ್ಲೂ ಈಗ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಕಾರಣಕ್ಕೆ ನಿರುದ್ಯೋಗ ಮತ್ತಷ್ಟು ಹೆಚ್ಚಾಗಿದೆ.

ಇದಕ್ಕೆ ಉದಾಹರಣೆ ಎಂಬಂತೆ ಎಂಎಸ್ಸಿ ಪದವೀಧರೆಯೊಬ್ಬರು ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಸಮೀಪದ ಅಂಜಿನಾಪುರದಲ್ಲಿ ಎಂಎಸ್ಸಿ ಪದವೀಧರೆ ದೀಪಶ್ರೀ ಕೂಲಿ ಕೆಲಸ ಮಾಡುತ್ತಿದ್ದವರಾಗಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಗಣಿತ ವಿಷಯದಲ್ಲಿ ಎಂಎಸ್ಸಿ ಮಾಡಿರುವ ದೀಪಶ್ರೀ, ತಂದೆ – ತಾಯಿಗೆ ನೆರವಾಗುವ ಉದ್ದೇಶದಿಂದ ಕೂಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಅವರ ಗಮನಕ್ಕೆ ಈ ವಿಷಯ ಬಂದಿದ್ದು, ಯುವತಿಗೆ ಉದ್ಯೋಗ ಕೊಡಿಸಲು ನೆರವಾಗುತ್ತೇನೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ