Breaking News

ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು

Spread the love

ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು

ನಕಪುರ: ಮಾಳಗಾಳು ಗ್ರಾಮದಲ್ಲಿ ಒಕ್ಕಲಿಗ ಸಮುದಾಯದ ಯುವಕರ ಗುಂಪೊಂದು ಭಾನುವಾರ ರಾತ್ರಿ ಪರಿಶಿಷ್ಟ ಜಾತಿ ಯುವಕನ ಮುಂಗೈ ಕತ್ತರಿಸಿ ಹಾಕಿದೆ.

ದಲಿತರ ಕಾಲೊನಿಗೆ ನುಗ್ಗಿದ ಗುಂಪು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ ಅನೀಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.

ಕನಕಪುರ: ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು

ಅನೀಶ್‌ ಎಡಗೈ ತುಂಡಾಗಿದ್ದು ಬೆಂಗಳೂರಿನ ಸೇಂಟ್ ಜಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಮಾವ, ಪಿಎಲ್‌ಡಿ ಬ್ಯಾಂಕ್ ಉದ್ಯೋಗಿ ಲಕ್ಷ್ಮಣ್ ಹಾಗೂ ಗೋವಿಂದರಾಜು ಕನಕಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯರು ಸೇರಿದಂತೆ ಏಳು ಮಂದಿ ಮೇಲೆ ಗುಂಪು ಹಲ್ಲೆ ನಡೆಸಿದೆ. ಮನೆ ಮುಂದೆ ನಿಲ್ಲಿಸಿದ್ದ ಎರಡು ಆಟೊಗಳನ್ನು ಜಖಂಗೊಳಿಸಿದೆ.

ಒಕ್ಕಲಿಗ ಸಮುದಾಯದ ಹರ್ಷ ಅಲಿಯಾಸ್ ಕೈಮ, ಕರುಣೇಶ, ರಾಹುಲ್, ಶಿವ, ಶಶಾಂಕ, ಸುಬ್ಬ, ದರ್ಶನ್ ಹಾಗೂ ಇತರರ ವಿರುದ್ಧ ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಹಾಗೂ ಕೊಲೆ ಯತ್ನ ಆರೋಪದಡಿ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ