Breaking News

ಶಿರೂರು ಗುಡ್ಡ ಕುಸಿತ ಪ್ರಕರಣ: 8 ದಿನಗಳ ನಂತರ ಮತ್ತೊಂದು ಮೃತದೇಹ ಪತ್ತೆ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 8 ದಿನಗಳ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ.

ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಮತ್ತೊಂದು ಶವ ಪತ್ತೆಯಾಗಿದೆ. ಅವರನ್ನು ಉಳುವರೆ ಗ್ರಾಮದ ವೃದ್ದೆ ಸಣ್ಣಿ ಹನುಮಂತ ಗೌಡ(61) ಎಂದು ಗುರುತಿಸಲಾಗಿದೆ.

ಮಣ್ಣು ಕುಸಿದ ಸ್ಥಳ, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಹೆದ್ದಾರಿಯಲ್ಲಿ ಇದುವರೆಗೆ ಶೇಕಡ 70ರಷ್ಟು ಮಣ್ಣು ತೆಗೆಯಲಾಗಿದ್ದು, ಇಂದು ಸಂಜೆ ಅಥವಾ ನಾಳೆ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಲಿದೆ. 7 ದಿನದಿಂದ ಹುಡುಕಾಟ ನಡೆಸಿದರೂ ಲಾರಿ ಚಾಲಕ ಅರ್ಜನ್ ಕಂಡುಬಂದಿಲ್ಲ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ