Breaking News

ಸಿಎಂ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ಬಿಜೆಪಿಯಿಂದ ನಿರಂತರ ಪ್ರಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

Spread the love

ಬೆಂಗಳೂರು: ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆಡಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ.

ಈ ಮೂಲಕ ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ನಿಗಮದ ಹಿಂದಿನ ಎಂಡಿ ಕಲ್ಲೇಶಪ್ಪ ಅವರಿಗೆ ಕಿರುಕುಳ ನೀಡಿರುವ ಇ.ಡಿ ಆಧಿಕಾರಿಗಳ ವರ್ತನೆ ವಿರೋಧಿಸಿ, ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು ಮಂಗಳವಾರ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಧರಣಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ಬಿಜೆಪಿಯಿಂದ ನಿರಂತರ ಪ್ರಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬಳಿಕ ಮಾತನಾಡಿದ ಸಚಿವರು, ಇ.ಡಿಯನ್ನ ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ನಮ್ಮ ಸರ್ಕಾರವನ್ನ ಅಸ್ಥಿರ ಗೊಳಿಸುವುದೇ ಕೇಂದ್ರ ಸರ್ಕಾರದ ಮೂಲ ಉದ್ದೇಶ ಎಂದು ವಾಗ್ದಾಳಿ ನಡೆಸಿದರು.ವಾಲ್ಮೀಕಿ ನಿಗಮದ ಹಗರಣದಲ್ಲಿ ನ್ಯಾಷನಲ್ ಬ್ಯಾಂಕ್​ಗಳ ಪಾತ್ರ ಕಂಡು ಬಂದಿದೆ. ಹಾಗಿದ್ದರೆ, ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲು ರಾಜೀನಾಮೆ ನೀಡಲಿ. ನಾವು ಯಾವ ತನಿಖೆಗೂ ಹೆದರಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸವಾಲು ಎಸೆದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ