ಬೆಳಗಾವಿ: ಜಮೀನು ವಿವಾದಕ್ಕೆ ಸಂಬಂಧಿಸಿ ಇಬ್ಬರು ಸಹೋದರರು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿಯಲ್ಲಿ ನಡೆದಿದೆ.
ಹನುಮಂತ ಖೋತ (34) ಹಾಗೂ ಖಂಡೋಬಾ ಖೋತ (32) ಮೃತಪಟ್ಟ ದುರ್ದೈವಿಗಳು.
ಕಳೆದ ಹಲವಾರು ವರ್ಷಗಳಿಂದ ಈ ಇಬ್ಬರು ಸಹೋದರರ ನಡುವೆ ಜಮೀನು ವಿವಾದ ಇತ್ತು ಎನ್ನಲಾಗಿದೆ ಅಲ್ಲದೆ ವಿವಾದ ಬಗೆಹರಿಸಲು ರಾಜಿ ಸಂಧಾನ ಮಾಡಿದ್ದರೂ ಯಾವುದೇ ಪ್ರಯೋಜನ ವಾಗಿರಲಿಲ್ಲ.
ಈ ನಡುವೆ ಮತ್ತೆ ಇಬ್ಬರು ಸಹೋದರರ ಮಧ್ಯೆ ಜಗಳ ನಡೆದು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡು ಗಂಭೀರ ಗಾಯಗೊಂಡಿದ್ದರು, ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಹೋದರರು ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7