Breaking News

ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವೇಳೆ ಅಯ ತಪ್ಪಿ ಯುವಕ ನೀರುಪಾಲು

Spread the love

ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವೇಳೆ ಅಯ ತಪ್ಪಿ ಯುವಕ ನೀರುಪಾಲು

ಚಿಕ್ಕೋಡಿ:ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಯುವಕನೋರ್ವ ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ನೈವದ್ಯ ಬಿಡಲು ಹೋದಾಗ ಆಯಾ ತಪ್ಪಿ ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದಂತಹ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

ರೋಹಣ ಪಾಟೀಲ(31) ಮೃತಪಟ್ಟ ಯುವಕ.

ಪ್ರತಿ ಸೋಮವಾರ ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವಾಡಿಕೆ. ಹೀಗಾಗಿ ಸ್ನೇಹಿತನ ಜೊತೆಗೆ ನೈವ್ಯದ್ಯ ಬಿಡಲು ಹೋದಾಗ ನದಿಯ ಸುಳಿಯಲ್ಲಿ ಸಿಲುಕಿ ಯುವಕ ಸಾವನ್ನಪ್ಪಿದ್ದಾನೆ.

ಮೃತ ಯುವಕನಿಗೆ ತಾಯಿ, ಸಹೋದರ ಸಹೋದರಿ ಇದ್ದು. ಕಳೆದ ಒಂದು ತಿಂಗಳ ಹಿಂದಷ್ಟೇ ಯುವಕನ ನಿಶ್ಚಿತಾರ್ಥವಾಗಿತ್ತು. ಯುವಕ ರೋಹಣ್ ಪಾಟೀಲ್ ಸಾವನ್ನಪ್ಪಿದ ಘಟನೆ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಂಕಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ