Breaking News

ನಿಗಮದ ಹಗರಣ; ಇ ಡಿ ನನ್ನನ್ನು ಅಕ್ರಮವಾಗಿ ಸಿಲುಕಿಸಲು ಬಯಸಿದೆ: ಸಿದ್ದರಾಮಯ್ಯ

Spread the love

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ನನ್ನನ್ನು ಅಕ್ರಮವಾಗಿ ಸಿಲುಕಿಸುವ ಮೂಲಕ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರವು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಆರೋಪ ಮಾಡಿದ್ದಾರೆ.

Valmiki ನಿಗಮದ ಹಗರಣ; ಇ ಡಿ ನನ್ನನ್ನು ಅಕ್ರಮವಾಗಿ ಸಿಲುಕಿಸಲು ಬಯಸಿದೆ: ಸಿದ್ದರಾಮಯ್ಯ

ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಅವ್ಯವಹಾರದ ತನಿಖೆ ವೇಳೆ ED ಅಕ್ರಮ ಎಸಗಿಗುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರು ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಆರೋಪ ಮಾಡಿದ್ದಾರೆ.ಇಡಿ ಯು ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಬಿ. ಕಲ್ಲೇಶ್ ಅವರನ್ನು ತನಿಖೆಗೆ ಕರೆಸಿದೆ ಮತ್ತು ಮುಖ್ಯಮಂತ್ರಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಲಿಖಿತವಾಗಿ ನೀಡುವಂತೆ ಅವರ ಮೇಲೆ ಒತ್ತಡ ಹೇರಿದೆ ಎಂದು ಹೇಳಿದರು.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ