Breaking News

ಹೊಂಡಕ್ಕೆ ಬಿದ್ದು ಮಹಿಳೆ ಆತ್ಮಹತ್ಯೆ

Spread the love

ಮುಂಡಗೋಡ: ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ‌ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಪಟ್ಟಣದ ಬಸವನ‌ ಹೊಂಡದಲ್ಲಿ ಜು. 23ರ ಮಂಗಳವಾರ ನಡೆದಿದೆ.

ಪಟ್ಟಣದ ಅಂಬೇಡ್ಕರ್ ಓಣಿಯ ರುಕ್ಮಿಣಿ ನಾಗೇಂದ್ರ ವಡ್ಡರ(50) ಮೃತಪಟ್ಟ ಮಹಿಳೆ.

ಮಹಿಳೆ (ಜು.23) ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಸವನ ಹೊಂಡದಲ್ಲಿ ಎಂಬಲ್ಲಿ ಹೊಂಡಕ್ಕೆ ಬಿದ್ದಿದ್ದಾರೆ.

ಇದನ್ನು ನೋಡಿದ ಸಾರ್ವಜನಿಕರು ಆಕೆಯನ್ನು ಹೊಂಡದಿಂದ ಮೇಲಕ್ಕೆತ್ತಿದ್ದಾರೆ. ಅದಾಗಲೇ ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿದ್ದರು.

ತಕ್ಷಣವೇ ಸಾರ್ವಜನಿಕರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸವದಿ ಬಿಜೆಪಿಯಲ್ಲಿದ್ದರೆ ದೊಡ್ಡ ಲೀಡರ್ ಆಗುತ್ತಿದ್ದ, ಆದರೀಗ ನಮ್ಮ ಪೀಡಾ ಹೋಗಿದೆ: ರಮೇಶ್ ಜಾರಕಿಹೊಳಿ

Spread the loveಸವದಿ ಬಿಜೆಪಿಯಲ್ಲಿದ್ದರೆ ದೊಡ್ಡ ಲೀಡರ್ ಆಗುತ್ತಿದ್ದ, ಆದರೀಗ ನಮ್ಮ ಪೀಡಾ ಹೋಗಿದೆ: ರಮೇಶ್ ಜಾರಕಿಹೊಳಿ ಚಿಕ್ಕೋಡಿ, ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ