ಸಂಕೇಶ್ವರ: ಸಮೀಪದ ಹಿರಣ್ಯಕೇಶಿ ನದಿಯ ಸೇತುವೆ ಮೇಲೆ ನೀರು ರಭಸದಿಂದ ಹರಿಯುತ್ತಿದ್ದರೂ ವಾಹನ ಸವಾರರು ಪ್ರಾಣಾಪಾಯವನ್ನೂ ಲೆಕ್ಕಿಸದೇ ನದಿ ನೀರಿನಲ್ಲಿಯೇ ವಾಹನ ಚಲಾಯಿಸಿಕೊಂಡು ಹೋದ ಘಟನೆ ನಡೆದಿದೆ.
ಕರ್ನಾಟಕ-ಮಹಾರಾಷ್ಟ್ರ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ಹಿರಣ್ಯಕೇಶಿ ನದಿ ಸೇತುವೆ ಜಲಾವೃತವಾಗಿದ್ದು, ಸುರಕ್ಷತೆ ದೃಷ್ಟಿಯಿಂದ ಸಂಚಾರ ನಿರ್ಬಂಧಿಸಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ಆದರೂ ಕೂಡಾ ವಾಹನ ಸವಾರರು ಜೀವದ ಹಂಗು ತೊರೆದು ವಾಹನ ಚಲಾಯಿಸಿ ಹುಚ್ಚಾಟ ಮೆರೆದಿದ್ದಾರೆ.