Breaking News

ವಾಹನ ಸವಾರರೇ ಗಮನಿಸಿ : ಇನ್ಮುಂದೆ ಈ ರೂಲ್ಸ್ ಬ್ರೇಕ್ ಮಾಡಿದ್ರೆ ʻFIRʼ ಫಿಕ್ಸ್!

Spread the love

ಬೆಂಗಳೂರು : ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ.

ವಾಹನ ಸವಾರರೇ ಗಮನಿಸಿ : ಇನ್ಮುಂದೆ ಈ ರೂಲ್ಸ್ ಬ್ರೇಕ್ ಮಾಡಿದ್ರೆ ʻFIRʼ ಫಿಕ್ಸ್!

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿ, ಈ ಕುರಿತು ಸದರಿ ಕಾರ್ಯಾಚರಣೆಗೆ ಆಸಕ್ತಿ ತೋರಿಸಿರುವ ಘಟಕಗಳಾದ ಬೆಂಗಳೂರು ನಗರ, ಮಂಗಳೂರು ನಗರ, ಹುಬ್ಬಳ್ಳಿ-ಧಾರವಾಡ ನಗರ, ಮೈಸೂರು ನಗರ, ಚಾಮರಾಜನಗರ, ಉತ್ತರ ಕನ್ನಡ ಜಿಲ್ಲೆ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಿರುವುದನ್ನು ಶ್ಲಾಘಿಸಲಾಗಿದೆ. (ಪುತಿ ಲಗತ್ತಿಸಿದೆ).

ಇದೇ ರೀತಿ, ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ (Wrong side driving), ಪುಟ್ ಪಾತ್ ಮೇಲೆ ವಾಹನ ಚಾಲನೆ (Driving on Foot path) ಬಗ್ಗೆ ವಿಶೇಷ ಕಾರ್ಯಾಚರಣೆ ಮಾಡುವುದು, ಇದರ ಜೊತೆಗೆ Defective Number Plate ಮೇಲೆ ಸಹ 01 ನೇ ಆಗಸ್ಟ್ 2024 ರಿಂದ ವಿಶೇಷ ಕಾರ್ಯಾಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ