Breaking News

ಬೆಂಗಳೂರು- ಕಾರವಾರ: 26, 28ರಂದು ವಿಶೇಷ ರೈಲು

Spread the love

ಹುಬ್ಬಳ್ಳಿ: ಪ್ರಯಾಣಿಕರ ಬೇಡಿಕೆ ಮೇರೆಗೆ ಬೆಂಗಳೂರು ಮತ್ತು ಕಾರವಾರ ನಡುವೆ ಜುಲೈ 26 ಮತ್ತು 28ರಂದು ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಬೆಂಗಳೂರಿನ ಸರ್‌ ಎಂ.ವಿಶ್ವೇಶ್ವರಯ್ಯ ನಿಲ್ದಾಣದಿಂದ ಎರಡೂ ದಿನ ಮಧ್ಯರಾತ್ರಿ 12.30ಕ್ಕೆ ಹೊರಡುವ ವಿಶೇಷ ರೈಲು (06567) ಸಂಜೆ 4ಕ್ಕೆ ಕಾರವಾರ ನಿಲ್ದಾಣ ತಲುಪಲಿದೆ.

ಪುನಃ ಇದೇ ರೈಲು ಅವತ್ತೇ ರಾತ್ರಿ 11.30ಕ್ಕೆ ಕಾರವಾರ ನಿಲ್ದಾಣದಿಂದ ಹೊರಟು, ಮರುದಿನ ಸಂಜೆ 3.30ಕ್ಕೆ ಬೆಂಗಳೂರಿನ ಸರ್‌ ಎಂ.ವಿಶ್ವೇಶ್ವರಯ್ಯ ನಿಲ್ದಾಣ ತಲುಪಲಿದೆ. ಬಾಣಸವಾಡಿ, ಚಿಕ್ಕಬಾಣಾವರ, ಕುಣಿಗಲ್, ಚನ್ನಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ಈ ವಿಶೇಷ ರೈಲು ನಿಲುಗಡೆ ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ