ಬೆಳಗಾವಿ: ಗೋಕಾಕ ಹಾಗೂ ಪಾಶ್ಚಾಪುರ ರಸ್ತೆಯಲ್ಲಿ ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಜು.24ರ ಬುಧವಾರ ಬೆಳಗ್ಗೆ ಸಂಭವಿಸಿದೆ.
ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ಬಸ್ ಉರುಳಿ ಬಿದ್ದು ಐವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಇನ್ನೂ ಕೆಲ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಗೋಕಾಕ ತಾಲೂಕಿನ ಮರಡಿಮಠ ಗ್ರಾಮದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಬಸ್ ಇದಾಗಿದ್ದು, ಮಾವನೂರ, ಗೊಡಚಿನಮಲ್ಕಿ, ಮೇಲಮಟ್ಟಿ ಗ್ರಾಮದ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ.
ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಲವು ವರ್ಷಗಳಿಂದ ಈ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ದುರಸ್ತಿ ಗೊಳಿಸುವಂತೆ ಅನೇಕ ತರ ಆಗ್ರಹಿಸಿದರೂ ಕಾಮಗಾರಿ ನಡೆದಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.
Laxmi News 24×7