Breaking News

ನಡುಗಡ್ಡೆಯಾದ ಜನವಸತಿ

Spread the love

ಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹುಲಗಬಾಳಿ ಗ್ರಾಮದ ವ್ಯಾಪ್ತಿಯ ಮಾಂಗ ಜನವಸತಿ ಪ್ರದೇಶವನ್ನು ಕೃಷ್ಣಾ ನದಿ ನೀರು ಸುತ್ತುವರಿದಿದ್ದು, 50 ಕುಟುಂಬಗಳು ನಡುಗಡ್ಡೆಯಲ್ಲಿ ಸಿಲುಕಿವೆ. ಅಲ್ಲಿನ ಜನ ಮತ್ತು ಜಾನುವಾರುಗಳನ್ನು ಬುಧವಾರ ಸಂಜೆ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.

ಸಂತ್ರಸ್ತರಿಗೆ ಹುಲುಗಬಾಳಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದೆ.

ನಡುಗಡ್ಡೆಯಾದ ಜನವಸತಿ: ಜನ, ಜಾನುವಾರು ಸ್ಥಳಾಂತರ

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ವೇಳೆ ಆಕ್ರೋಶಗೊಂಡ ಜನ, ‘ನಮಗೆ ಶಾಶ್ವತ ನೆಲೆ ಕಲ್ಪಿಸಬೇಕು. ಪ್ರತಿ ವರ್ಷ ತಾತ್ಕಾಲಿಕ ಸ್ಥಳಾಂತರ ಬೇಡ. ಅಲ್ಲಿಯವರೆಗೆ ಸ್ಥಳದಿಂದ ಕದಲುವುದಿಲ್ಲ’ ಎಂದು ಪಟ್ಟು ಹಿಡಿದರು. ಅವರನ್ನು ಸಮಾಧಾನಪಡಿಸಿದ ಅಧಿಕಾರಿಗಳು, ‘ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಸದ್ಯ ಅಪಾಯದ ಮಟ್ಟವಿದೆ. ಸುರಕ್ಷಿತ ಸ್ಥಳದಲ್ಲಿ ವ್ಯವಸ್ಥೆ ಮಾಡಲಾಗಿದೆ’ ಎಂದರು.


Spread the love

About Laxminews 24x7

Check Also

ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ನೆರವೇರಿಸಿದರು.

Spread the love ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ