ಎಂ.ಕೆ.ಹುಬ್ಬಳ್ಳಿ: ನಿರಂತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲಪ್ರಭೆ ಮೈದುಂಬಿ ಹರಿಯುತ್ತಿದ್ದಾಳೆ.
ಖಾನಾಪುರದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಮಲಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಎಂ.ಕೆ.ಹುಬ್ಬಳ್ಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ-4ರ ಪಕ್ಕದಲ್ಲಿ ಮಲಪ್ರಭಾ ನದಿ ಮಧ್ಯದಲ್ಲಿರುವ ಶರಣೆ ಗಂಗಾಂಬಿಕಾ ಐಕ್ಯಮಂಟಪದ ಸುತ್ತ ಮಲಪ್ರಭೆಯ ಮೈದುಂಬಿ ಹರಿಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ.

ಮಳೆಯ ಆರ್ಭಟ ಮುಂದುವರಿದಿದ್ದು, ದಿನದಿಂದ ದಿನಕ್ಕೆ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ. ಸದ್ಯ ಎಂ.ಕೆ.ಹುಬ್ಬಳ್ಳಿ ಬಳಿಯ ನದಿಯಲ್ಲಿ ಅಡ್ಡಲಾಗಿರುವ ಬ್ರಿಜ್ ಕಂ ಬ್ಯಾರೇಜ್ ಮುಳುಗಡೆಯಾಗಿದ್ದು, ಪಕ್ಕದಲ್ಲಿರುವ ಹಳೇ ಸೇತುವೆ ಮೇಲ್ಭಾಗಕ್ಕೂ ಮಲಪ್ರಭಾ ನದಿ ನೀರಿನ ಹರಿವು ತಾಗುತ್ತಿದೆ. ಹಳೇ ಸೇತುವೆ ಮುಳುಗಡೆಯಾದರೆ, ನದಿ ಪ್ರವಾಹ ಪಕ್ಕದ ಕೃಷಿ ಜಮೀನುಗಳಿಗೆ ಆವರಿಸಿಕೊಳ್ಳಲಿದೆ. ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹಾಗೂ ಸುತ್ತಲಿನ ಗ್ರಾಮಗಳಲ್ಲೂ ಮಳೆಯ ಆರ್ಭಟ ಮುಂದುವರಿದಿದೆ.
Laxmi News 24×7