Breaking News

ಆಯುಕ್ತರ ಕಚೇರಿಗೆ ಪೌರಕಾರ್ಮಿಕರ ಮುತ್ತಿಗೆ

Spread the love

ಹುಬ್ಬಳ್ಳಿ: ಸೇವೆ ಕಾಯಂಗೊಳಿಸುವುದು, ನೇರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪೌರಕಾರ್ಮಿಕರು, ಮಂಗಳವಾರ ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಆಯುಕ್ತರ ಕಚೇರಿಗೆ ಪೌರಕಾರ್ಮಿಕರ ಮುತ್ತಿಗೆ

ಪೌರಕಾರ್ಮಿಕರ ಸಂಘದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಾರಾಯಣ ಅವರ ನೇತೃತ್ವದಲ್ಲಿ ಆಯುಕ್ತರ ಕಚೇರಿ ಎದುರು ಕುಳಿತ ‍ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ನಾರಾಯಣ ಮಾನತಾಡಿ, ‘ಮಹಾನಗರ ಪಾಲಿಕೆ ಆಯುಕ್ತ, ಮೇಯರ್ ಅವರು ಬೇಡಿಕೆಗಳ ಈಡೇರಿಕೆಗೆ ನಿರ್ಲಕ್ಷ ವಹಿಸುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು’ ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಎಂ. ಗುಂಟ್ರಾಳ ಮಾತನಾಡಿದರು.

ಗಂಗಮ್ಮ ಸಿದ್ರಾಮಪುರ, ಗಾಳೆಪ್ಪ ದ್ವಾಸಲಕೇರಿ, ಸೋಮು ಮೊರಬದ, ಶರಣಪ್ಪ ಅಮರಾವತಿ, ಕಿರಣಕುಮಾರ್ ಸೋಮರಡ್ಡಿ, ನಾಗರಾಜ ದೊಡ್ಡಮನಿ, ತಾಯಪ್ಪ ಬೆಳ್ಳಿಕೊಪ್ಪ ಕನಕಪ್ಪ ಕೋಟಬಾಗಿ, ಅನಿತಾ, ಲಕ್ಷಮಿ ಬೇತಾಪಲ್ಲಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಸುರೇಶ ಬಾಬು ಇದ್ದರು.


Spread the love

About Laxminews 24x7

Check Also

ನೇಹಾ ಹಿರೇಮಠ ಕೊಲೆ ಆರೋಪಿಗೆ ಜಾಮೀನು ತಿರಸ್ಕಾರ: ಆ‌ಗಸ್ಟ್​​ 6ಕ್ಕೆ ವಿಚಾರಣೆ ಮುಂದೂಡಿಕೆ

Spread the loveಹುಬ್ಬಳ್ಳಿ: ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಖೊಂಡೋನಾಯ್ಕ್​​​ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ