ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಪೊಲೀಸ್ ಸಬ್ ಇನ್ಸಪೆಕ್ಟರ್‌ಗಳನ್ನು (ಪಿಎಸ್‌ಐ) ನಗರದ ವಿವಿಧ ಠಾಣೆಗಳಿಗೆ ಆಂತರಿಕ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ.
ಇತ್ತೀಚೆಗೆ ಒಂದೇ ಠಾಣೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಕಾಲ ಕರ್ತವ್ಯ ನಿರ್ವಹಿಸಿದ್ದ ಎಎಸ್‌ಐ, ಹೆಡ್ ಕಾನ್‌ಸ್ಟೆಬಲ್, ಕಾನ್‌ಸ್ಟೆಬಲ್‌ಗಳನ್ನು ಕೌನ್ಸ್‌ಲಿಂಗ್ ಮೂಲಕ ವಿವಿಧ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿತ್ತು.