Breaking News

KASʼ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌

Spread the love

ಬೆಂಗಳೂರು : ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ ಮಾಡುವ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ʻKASʼ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆ ʻವಯೋಮಿತಿʼ ಸಡಿಲಿಕೆ

ಈ ಕುರಿತು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಹಲವು ವರ್ಷಗಳಿಂದ ಖಾಲಿಯಿರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆ ಭರ್ತಿ ಆಗಿರಲಿಲ್ಲ. ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದ ನೇಮಕಾತಿ ವಿಳಂಬವಾಗಿತ್ತು. ಈಬಾರಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿಯಲ್ಲಿ ಗರಿಷ್ಠ 3 ವರ್ಷ ವಯೋಮಿತಿ ಸಡಿಲಗೊಳಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ಸಭೆಯಲಿ ನಿರ್ಧರಿಸಲಾಗಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ