Breaking News

ರಾಧಾನಗರಿ ಡ್ಯಾಂನಿಂದ ನೀರು ಬಿಡುಗಡೆ

Spread the love

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿದ್ದು, ದೂಧಗಂಗಾ ನದಿಗೆ ಅಡ್ಡಲಾಗಿರುವ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ಜಲಾಶಯದ 6 ಸ್ವಯಂ ಚಾಲಿತ ಗೇಟ್‌ಗಳನ್ನು ತೆರೆದು 2928 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ.

8.36 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಡ್ಯಾಂ ಬಹುತೇಕ ಭರ್ತಿಯಾಗಿದೆ. ಹೀಗಾಗಿ ಗುರುವಾರ ಬೆಳಿಗ್ಗೆಯಿಂದ ಅಣೆಕಟ್ಟುಯಿಂದ ನೀರನ್ನು ಹೊರಬಿಡಲಾಗುತ್ತಿದೆ.

ಇನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಪಂಚಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಗರಿಷ್ಠ ಮಟ್ಟ 43 ಅಡಿ ಮೀರಿ ಹರಿಯುತ್ತಿದ್ದು, ಬೃಹತ್ ಹಾಗೂ ಸಣ್ಣಪುಟ್ಟ ಸೇರಿದಂತೆ ಇದುವರೆಗೆ ಪಂಚಗಂಗಾ ನದಿಯಿಂದ 81 ಸೇತುವೆಗಳು ಜಲಾವೃತಗೊಂಡಿವೆ. ನದಿ ತನ್ನ ಪಾತ್ರ ಬದಲಿಸಿ ಸಹಸ್ರಾರು ಹೆಕ್ಟೇರ್ ಜಮೀನಿಗೆ ನುಗ್ಗಿ ಬೆಳೆಯನ್ನು ಆಹುತಿ ತೆಗೆದುಕೊಂಡಿದೆ. ಪಂಚಗಂಗಾ ನದಿ ನೀರಿನಲ್ಲಿ ಹೆಚ್ಚಳವಾಗಿದ್ದರಿಂದ ಚಿಕ್ಕೋಡಿ ಉಪ ವಿಭಾಗದ ಕೃಷ್ಣಾ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.

 ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯ ಉಪನದಿ ಪಂಚಗಂಗಾ ಪಾತ್ರ ಬಿಟ್ಟು ಹರಿದು ಹೊಲ ಗದ್ದೆಗಳಿಗೆ ನೀರು ನುಗ್ಗಿರುವುದು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ