Breaking News

ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಸಂಸದರ ಪ್ರತಿಭಟನೆ

Spread the love

ಬೆಂಗಳೂರು: ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ (MUDA) ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು ಮಾದಿರುವುದನ್ನು ಖಂಡಿಸಿ ಶುಕ್ರವಾರ ಸಂಸತ್ ಭವನದ ಆವರಣದಲ್ಲಿ ಕರ್ನಾಟಕದ NDA ಸಂಸದರು ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದರು.

CM Siddaramaiah ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಸಂಸದರ ಪ್ರತಿಭಟನೆ

ಕರ್ನಾಟಕದ ಬಿಜೆಪಿ ಮತ್ತು ಜೆಡಿಎಸ್ ನ ಎರಡೂ ಸದನಗಳ ಸಂಸದರು ದೆಹಲಿಯಲ್ಲಿ ಸರ್ಕಾರದ ಅಕ್ರಮಗಳನ್ನು ಪ್ರತಿಭಟಿಸುವ ಮೂಲಕ ಸರಕಾರದ ಕಾರ್ಯವೈಖರಿಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿದರು.

”ಕರ್ನಾಟಕದ ದಲಿತರ ಹಣವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದೆ. ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ” ಎಂಬರ್ಥವುಳ್ಳ ಹಿಂದಿ ಘೋಷಣೆ ಕೂಗಿದರು. ‘ಹಠಾವೋ, ಹಠಾವೋ ಭ್ರಷ್ಟ ಮುಖ್ಯಮಂತ್ರಿ ಕೋ ಹಠಾವೋ’ ಎಂಬ ಘೋಷಣೆಯನ್ನೂ ಕೂಗಿದರು.


Spread the love

About Laxminews 24x7

Check Also

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ

Spread the love ಬೆಂಗಳೂರು: ಮೈಕ್ರೋ ಫೈನಾನ್ಸಿಯರ್​ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ