Breaking News

ರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ:H.D.K.

Spread the love

ವದೆಹಲಿ: ರಾಮನಗರ ಜಿಲ್ಲೆಗೆ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ, ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಶುಕ್ರವಾರ ಸಂಜೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯ ಹೆಸರನ್ನು ತೆಗೆದು ಬೆಂಗಳೂರು ದಕ್ಷಿಣ ಎಂದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರವನ್ನು ಕಟುವಾಗಿ ಟೀಕಿಸಿದರು.

ಯಾವುದೇ ಕಾರಣಕ್ಕೂ ರಾಮನಗರದಿಂದ ರಾಮನ ಹೆಸರನ್ನು ಬೇರ್ಪಡಿಸಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರು ತೆಗೆಯಲು ಸಾಧ್ಯ ಆಗುವುದಿಲ್ಲ. ಜಿಲ್ಲೆ ರಚನೆ ಮಾಡಿ ರಾಮನಗರ ಎಂದು ಹೆಸರಿಡುವಾಗ, ವಿಧಾನಸಭೆ ಕ್ಷೇತ್ರಕ್ಕೆ ರಾಮನಗರ ಎಂದು ಹೆಸರು ಇಡುವಾಗ ಯಾವುದೇ ಮಾತು ಆಡಲೇ ಇಲ್ಲ. ತಕರಾರು ಮಾಡಲಿಲ್ಲ. ಈಗ ಸ್ವಾರ್ಥಕ್ಕಾಗಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ಆರೋಪಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ