ಹುಬ್ಬಳ್ಳಿ: ತೀವ್ರ ಜ್ವರದಿಂದ ಬಳಲುತ್ತಿದ್ದ ಕುಂದಗೋಳ ತಾಲೂಕ ಹಿರೇನರ್ತಿ ಗ್ರಾಮದ ಐದು ವರ್ಷದ ಬಾಲಕಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾಳೆ. ಬಾಲಕಿಯು ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಪೂರ್ಣಾ ಎಂಬ ಬಾಲಕಿಯನ್ನು ಅವಳ ಪಾಲಕರು ಮೊದಲು ಕುಂದಗೋಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.