Breaking News

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ. ಆರೋಪಿ ಕಾಲಿಗೆ ಗುಂಡೇಟು

Spread the love

ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರದ ರಮೇಶ ಭವನ ಬಳಿ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ ಮಾಡಿದ್ದ ಅಂತಾರಾಜ್ಯ ದರೋಡೆಕೋರನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ದರೋಡೆಕೋರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಗಾಮನಗಟ್ಟಿ ರಸ್ತೆ ತಾರಿಹಾಳ ಕ್ರಾಸ್ ಬಳಿ ನಡೆದಿದೆ.

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ. ಆರೋಪಿ ಕಾಲಿಗೆ ಗುಂಡೇಟು

ಬಂಧಿತ ಆರೋಪಿಯನ್ನು ಮುಂಬೈ ಮೂಲದ ಫರ್ಹಾನ್ ಶೇಖ್ ಎನ್ನಲಾಗಿದೆ.

ಕೇಶ್ವಾಪುರದ ರಮೇಶ ಭವನದ ಬಳಿಯಿರುವ ಭುವನೇಶ್ವರಿ ಜ್ಯುವೆಲ್ಲರಿ ಶಾಪ್‌ನಲ್ಲಿನ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ರಾತ್ರಿ ಕೇಶ್ವಾಪುರ ಠಾಣೆ ಪೊಲೀಸರು ಆರೋಪಿ ಫರ್ಹಾನ್ ಶೇಖ್‌ನನ್ನು ವಶಕ್ಕೆ ಪಡೆದಿದ್ದರು. ಇನ್ನುಳಿದ ಆರೋಪಿಗಳನ್ನು ವಶಕ್ಕೆ ಪಡೆಯುವ ಸಲುವಾಗಿ ಆರೋಪಿ ಜೊತೆಗೆ ಪೊಲೀಸರು ಇಂದು ಬೆಳಿಗ್ಗೆ ಗಾಮನಗಟ್ಟಿ ರಸ್ತೆ ತಾರಿಹಾಳ ಕ್ರಾಸ್ ಬಳಿ ತಪಾಸಣೆ ನಡೆಸುತಿದ್ದಾಗ ಆರೋಪಿಗಳು ಬರುತ್ತಿದ್ದಂತೆ ಫರ್ಹಾನ್ ಶೇಖ್ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆ ವೇಳೆ ಗೋಕುಲ ಠಾಣೆಯ ಪಿಎಸ್‌ಐ ಕವಿತಾ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ, ನಂತರ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ‌.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ