Breaking News

ಭಾರತಕ್ಕೆ​ ಒಲಿಯಿತು ಮೊದಲ ಕಂಚು

Spread the love

ಪ್ಯಾರಿಸ್​: ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪಿಸ್ತೂಲ್​ ದೋಷದಿಂದ ಹಿನ್ನಡೆ ಅನುಭವಿಸಿದ್ದ ಶೂಟರ್​ ಮನು ಭಾಕರ್(Manu Bhaker)​ ಇದೀಗ ಪ್ಯಾರಿಸ್(Paris Olympics Shooting)​ ಒಲಿಂಪಿಕ್ಸ್​ನಲ್ಲಿ ಐತಿಹಾಸಿಕ ಪದಕವೊಂದನ್ನು ಗೆದ್ದು ಸಂಭ್ರಮಿಸಿದ್ದಾರೆ. 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ಫೈನಲ್​ ಪಂದ್ಯದಲ್ಲಿ 221.7 ಅಂಕ ಗಳಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಇದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಒಲಿದ ಮೊದಲ ಪದಕ. ಕೊರಿಯಾದ ಶೂಟರ್​ಗಳಾದ ಓಹ್ ಯೇ ಜಿನ್(243.2), ಕಿಮ್​ ಯೆಜಿ(241.3) ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದರು.

2004ರಲ್ಲಿ ಅಥೆನ್ಸ್‌ನಲ್ಲಿ ನಡೆದ 10 ಮೀಟರ್‌ ಏರ್‌ ರೈಫಲ್‌ ಸ್ಪರ್ಧೆಯಲ್ಲಿ ಸುಮಾ ಶಿರೂರ್‌ ಕೊನೆಯ ಬಾರಿಗೆ ಫೈನಲ್‌ ತಲುಪಿದ್ದರು. ಆದರೆ ಅವರಿಂದ ಪದಕ ಗೆಲ್ಲಲು ಸಾಧ್ಯವಾಗಿರಲಿಲ್ಲ. ಅವರು 8ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಇದೀಗ ಮನು ಭಾಕರ್​ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಶೂಟಿಂಗ್​ನಲ್ಲಿ ಭಾರತಕ್ಕೆ ಪದಕ ಗೆದ್ದ ಮೊದಲ ಮಹಿಳಾ ಶೂಟರ್​ ಎನ್ನುವ ದಾಖಲೆಯನ್ನು ಕೂಡ ತಮ್ಮ ಹೆಸರಿಗೆ ಬರೆದರು.

 

 

ಅಂದು ನಿರಾಸೆ… ಇಂದು ಖುಷಿ

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಇದು ಅವರ ಪದಾರ್ಪಣ ಒಲಿಂಪಿಕ್ಸ್​ ಕೂಟವಾಗಿತ್ತು. ಆಗ ಅವರಿಗೆ ಕೇವಲ 19 ವರ್ಷ ವಯಸ್ಸಾಗಿತ್ತು. ಅಂದಿನ ನಿರಾಸೆಯನ್ನು ಈಗ ಪ್ಯಾರಿಸ್​ನಲ್ಲಿ ಪದಕ ಗೆಲ್ಲುವ ಮೂಲಕ ನೀಗಿಸಿಕೊಂಡರು.


Spread the love

About Laxminews 24x7

Check Also

ಅಧಿಕಾರಿಯ ಪ್ರತಿ ವರ್ಗಾವಣೆಗೂ ಗೆಜೆಟ್ ಅಧಿಸೂಚನೆ ಹೊರಡಿಸುವ ಅಗತ್ಯ ಇಲ್ಲ: ಹೈಕೋರ್ಟ್

Spread the loveಬೆಂಗಳೂರು: ರಾಜ್ಯದ ಒಂದು ವೃತ್ತದಲ್ಲಿ ಸೇವೆ ಸಲ್ಲಿಸುವ ಅಧಿಕಾರಿಗೆ ಡ್ರಗ್ಸ್ ಇನ್ಸ್​ಪೆಕ್ಟರ್ ಎಂಬುದಾಗಿ ಗೆಜೆಟ್‌ ಅಧಿಸೂಚನೆ ಹೊರಡಿಸಿದ ಬಳಿಕ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ