Breaking News

ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ ಶಿಪ್

Spread the love

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?: * ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಅರ್ಹರು.

* ಮೊದಲನೆಯ ಪ್ರಯತ್ನದಲ್ಲಿಯೆ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
* ದ್ವಿತೀಯ ಪಿಯುಸಿ, ಡಿಪ್ಲೋಮಾ, ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು 2024 ನೇ ಸಾಲಿನಲ್ಲಿ ಮುಗಿಸಿದ್ದವರು ಈ ಪ್ರೋತ್ಸಾಹ ಧನವನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.

ಎಷ್ಟು ಸ್ಕಾಲರ್ ಶಿಪ್ ಲಭ್ಯ:
* ದ್ವಿತೀಯ ಪಿಯುಸಿ ಹಾಗೂ ಮೂರು ವರ್ಷದ ಡಿಪ್ಲೋಮಾ ಮುಗಿಸಿದವರಿಗೆ -20,000
* ಪದವಿ ಮುಗಿಸಿರುವ ವಿದ್ಯಾರ್ಥಿಗಳಿಗೆ – 25,000
* ಸ್ನಾತಕೋತ್ತರ ಪದವಿ ಮುಗಿಸಿದವರಿಗೆ – 30,000
* ವೃತ್ತಿಪರ ಪದವಿ ಮುಗಿಸಿದವರಿಗೆ – 35,000

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?:
* ಆಧಾರ್ ಕಾರ್ಡ್
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* 10 ನೇ ತರಗತಿ ಅಂಕಪಟ್ಟಿ
* ಬ್ಯಾಂಕ್ ಖಾತೆಯ ವಿವರ
* ಮೊಬೈಲ್ ನಂಬರ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಇನ್ನು ನಿಗದಿಪಡಿಸಲಾಗಿಲ್ಲ. ಇಲಾಖೆಗಳು ನಿಗದಿಪಡಿಸಿದ ನಂತರ ತಿಳಿಸಲಾಗುವುದು.

ಪರಿಶಿಷ್ಟ ಜಾತಿಯವರ ಅರ್ಜಿ ಸಲ್ಲಿಸುವ ಲಿಂಕ್ :

ಪರಿಶಿಷ್ಟ ಪಂಗಡದವರಿಗೆ ಅರ್ಜಿ ಸಲ್ಲಿಸಬೇಕಾಗಿರುವ ಲಿಂಕ್


Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ