ಮೈಸೂರು: ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ‘ಅನ್ಯಾಯ’ ಎಸಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ನಮ್ಮ ವಿರುದ್ಧ “ಸುಳ್ಳು” ಆರೋಪಗಳನ್ನು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಅನುದಾನ ಹಂಚಿಕೆ ಕುರಿತು ಸಾಕಷ್ಟು ತಪ್ಪು ಮಾಹಿತಿಗಳನ್ನು ಹರಡಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದರು. ‘ಕಾಂಗ್ರೆಸ್ ಆಡಳಿತವಿರುವ ಕರ್ನಾಟಕವನ್ನು ‘ಭ್ರಷ್ಟ ರಾಜ್ಯ’ ಎಂದು ಬಣ್ಣಿಸಲು ಬಿಜೆಪಿ ಯತ್ನಿಸುತ್ತಿದೆ’ ಎಂದು ಆರೋಪಿಸಿದರು. ಕರ್ನಾಟಕ ಭ್ರಷ್ಟವಾಗಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ, ನಮ್ಮ ಸರ್ಕಾರದ ಅಡಿಯಲ್ಲಿ ಭ್ರಷ್ಟಾಚಾರ ಕಡಿಮೆಯಾಗಿದೆ’ ಎಂದರು.