Breaking News

ಮದ್ಯಪ್ರಿಯರಿಗೆ ಶಾಕ್; ಮತ್ತೆ ಬಿಯರ್ ಬೆಲೆ ಏರಿಕೆ, ಬಾಟಲ್​ಗೆ ಎಷ್ಟು ಹೆಚ್ಚಾಯ್ತು?

Spread the love

ಬೆಂಗಳೂರು, ಜುಲೈ 30: ಮದ್ಯಪಾನ ಆರೋಗ್ಯ ಹಾನಿಕಾರ ಅಂದ್ರೂ ಮದ್ಯ ಕುಡಿಯುವರ ಸಂಖ್ಯೆ ಕಡಿಮೆಯಾಗಿಲ್ಲ. ಒಂದು ತಿಂಗಳ ಹಿಂದೆಯಷ್ಟೆ ಬಿಯರ್​ ಬೆಲೆ ಏರಿಕೆಯಾಗಿತ್ತು. ಇದೀಗ ಮತ್ತೆ ಬಿಯರ್ ಬೆಲೆ ಏರಿಕೆಯಾಗಿದೆ. ಬಿಯರ್​ ಕುಡಿಯುವವರಿಗೆ ಉತ್ಪಾದನಾ ಕಂಪನಿಗಳು ಮತ್ತೊಮ್ಮೆ ಶಾಕ್​ ನೀಡಿವೆ.

Beer Price Hike: ಮದ್ಯಪ್ರಿಯರಿಗೆ ಶಾಕ್; ಮತ್ತೆ ಬಿಯರ್ ಬೆಲೆ ಏರಿಕೆ, ಬಾಟಲ್​ಗೆ ಎಷ್ಟು ಹೆಚ್ಚಾಯ್ತು?

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕಳೆದ ಒಂದು ತಿಂಗಳ ಹಿಂದಷ್ಟೇ ಬಿಯರ್ ಕಂಪನಿಗಳು ಬಿಯರ್ ಬೆಲೆಯನ್ನು ಏರಿಕೆ ಮಾಡಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಫೆಬ್ರವರಿಯಲ್ಲಿ ಮೊದಲ ಶಾಕ್ ನೀಡಿತ್ತು. ಈಗ ಮತ್ತೊಮ್ಮೆ ಕಚ್ಚಾವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಬೆಲೆ ಏರಿಕೆ ಮಾಡಿದೆ. ಒಂದು ತಿಂಗಳ ಹಿಂದಷ್ಟೇ ಏರಿಕೆಯಾಗಿದ್ದ ಬಿಯರ್ ಬೆಲೆಯನ್ನು ಮತ್ತೆ ಹೆಚ್ಚಳ ಮಾಡಲಾಗಿದ್ದು, ಒಂದು ಬಿಯರ್ ಬಾಟೆಲ್ ಮೇಲೆ 10 ರಿಂದ 20 ರೂಪಾಯಿಗೆ ಏರಿಕೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆ ಆಗಿದ್ದು, ಈಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ದರ ಏರಿಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಯರ್ ದರ 50ರಿಂದ 60 ರೂ.ವರೆಗೆ ಏರಿಕೆಯಾಗಿದೆ.


Spread the love

About Laxminews 24x7

Check Also

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿ

Spread the loveಇಂದು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ