Breaking News

ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

Spread the love

ವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ