Breaking News

‘ಪಾರ್ಟಿ’ ಕೊಟ್ಟ ಗೆಳತಿಯನ್ನೇ ‘ಗ್ಯಾಂಗ್ ರೇಪ್’ ಮಾಡಿದ ಸ್ನೇಹಿತರು..!

Spread the love

24 ವರ್ಷದ ಸಾಫ್ಟ್ವೇರ್ ಉದ್ಯೋಗಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

24 ವರ್ಷದ ಸಂತ್ರಸ್ತ ಯುವತಿ ದೂರು ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆಹಚ್ಚಲು ಅವರು ಹುಡುಕಾಟವನ್ನು ಪ್ರಾರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

SHOCKING : ಹೊಸ ಕೆಲಸ ಸಿಕ್ಕಿದ ಖುಷಿಗೆ 'ಪಾರ್ಟಿ' ಕೊಟ್ಟ ಗೆಳತಿಯನ್ನೇ 'ಗ್ಯಾಂಗ್ ರೇಪ್' ಮಾಡಿದ ಸ್ನೇಹಿತರು..!

ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಸಿಕ್ಕ ಖುಷಿಗೆ ಯುವತಿ ತನ್ನ ಸ್ನೇಹಿತರಿಗೆ ಪಾರ್ಟಿ ಆಯೋಜಿಸಿದ್ದರು. ಅವಳ ಬಾಲ್ಯದ ಸ್ನೇಹಿತ ಸ್ಥಳೀಯ ಪಬ್ ಗೆ ಹೋಗಿ ಮದ್ಯ ಸೇವಿಸಿದ್ದು, ನಂತರ ಕೋಣೆಯೊಂದರಲ್ಲಿ ಆಕೆಯನ್ನು ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾನೆ. ಶಾಕಿಂಗ್ ವಿಚಾರ ಅಂದರೆ ಅವನು ತನ್ನ ಸೋದರಸಂಬಂಧಿಯನ್ನು ಕೂಡ ಈ ಘೋರ ಕೃತ್ಯದಲ್ಲಿ ಸೇರಲು ಕರೆದಿದ್ದಾನೆ. ನಂತರ ಇಬ್ಬರು ಸೇರಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಒಂದೇ ಕಾಲೋನಿಯಲ್ಲಿ ವಾಸಿಸುತ್ತಿದ್ದು, ಬಾಲ್ಯದಿಂದಲೂ ಪರಸ್ಪರ ತಿಳಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ಎಂಜಿನಿಯರಿಂಗ್ ಪದವೀಧರ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಪೊಲೀಸರು ಅಪರಾಧದ ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಿದ್ದು, ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 70 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. “ನಾವು ಆರೋಪಿಗಳಿಗಾಗಿ ಹುಡುಕುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ