Breaking News

ಯತ್ನಾಳ ಎಲ್ಲಿಂದ ಮಾಹಿತಿ ಸಂಗ್ರಹಿಸುತ್ತಾರೆ ಎಂಬುದೇ ವಿಚಿತ್ರ: ಹೆಬ್ಬಾಳಕರ

Spread the love

ಬೆಳಗಾವಿ: ‘ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಹೈಕಮಾಂಡ್‌ಗೆ ₹2,000 ಕೋಟಿ, ಮಂತ್ರಿ ಸ್ಥಾನಕ್ಕೆ ₹500 ಕೋಟಿ ನೀಡಬೇಕಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರೇ ಈ ಹಿಂದೆ ಹೇಳಿದ್ದರು. ಈಗ ಸಿದ್ದರಾಮಯ್ಯ ವಿರುದ್ಧ ನಮ್ಮವರೇ ದಾಖಲೆ ನೀಡುತ್ತಿದ್ದಾರೆ ಎನ್ನುತ್ತಿದ್ದಾರೆ.

ಅವರು ಎಲ್ಲಿಂದ ಇಂಥ ವಿಷಯ ಸಂಗ್ರಹಿಸುತ್ತಾರೆ ಎಂಬುದೇ ವಿಚಿತ್ರ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿರುಗೇಟು ನೀಡಿದರು.

‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಲು ಕಾಂಗ್ರೆಸ್‌ನವರೇ ದಾಖಲೆ ಕೊಡುತ್ತಿದ್ದಾರೆ’ ಎಂಬ ಯತ್ನಾಳ ಆರೋಪಕ್ಕೆ, ಇಲ್ಲಿ ಬುಧವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು.

‘ಡಿ.ಕೆ.ಶಿವಕುಮಾರ್‌ ಅವರ ಋಣ ತೀರಿಸಲು ಬಿ.ವೈ.ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆಯೇ’ ಎಂಬ ಪ್ರಶ್ನೆಗೆ, ‘ಅವರದ್ದು ಯಾವ ಋಣ ಎಂದು ನನಗೆ ಗೊತ್ತಿಲ್ಲ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಯನ್ನು ಬಿಜೆಪಿಯವರು ಆಯ್ಕೆ ಮಾಡುತ್ತಾರೆ ಎಂಬ ಮಾತು ಸೂರ್ಯ ಪಶ್ಚಿಮ ದಿಕ್ಕಿನಲ್ಲಿ ಹುಟ್ಟುತ್ತಾನೆಯೇನೋ ಎಂಬಂತಿದೆ’ ಎಂದರು.

‘2019ರಲ್ಲಿ ಬೆಳಗಾವಿ ಜಿಲ್ಲೆ ಶತಮಾನದಲ್ಲೇ ಕಂಡರಿಯದ ಪ್ರವಾಹದಿಂದ ತತ್ತರಿಸಿತ್ತು. ಆದರೆ, ಪ್ರಧಾನಿ ಇಲ್ಲಿಗೆ ಭೇಟಿ ಕೊಟ್ಟಿರಲಿಲ್ಲ. ಆದರೆ, ಸದ್ಯದ ಪ್ರವಾಹಪೀಡಿತ ಸ್ಥಳಗಳ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಾಹಿತಿ ಪಡೆಯುತ್ತಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಜಿಲ್ಲೆ ವಿಭಜನೆಯಾಗದ ಕಾರಣ ಆಡಳಿತಕ್ಕೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿದೆ. ಇದನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ಜಿಲ್ಲೆಗಳಾಗಿ ವಿಭಜಿಸಬೇಕೆಂಬ ಚರ್ಚೆ ಇದೆ‌. ಉನ್ನತಮಟ್ಟದ ಸಭೆಯಲ್ಲೇ ತೀರ್ಮಾನಿಸಲಾಗುವುದು’ ಎಂದು ಹೇಳಿದರು


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ