Breaking News

ಅವಳಿ ಜಲಾಶಯಗಳಿಗೆ ಬಾಗಿನ ಸಮರ್ಪಣೆ

Spread the love

ಹೊಸನಗರ: ನಾಡಿನ ಬೆಳಕಿಗಾಗಿ ಬಹುದೊಡ್ಡ ಕೊಡುಗೆ ನೀಡಿದ ಚಕ್ರಾ-ಸಾವೇಹಕ್ಲು ಅವಳಿ ಜಲಾಶಯಗಳು ಗಮನಾರ್ಹ ಅಭಿವೃದ್ಧಿ ಕಾಣಬೇಕಾಗಿದೆ. ಈ ಪ್ರದೇಶವು ‘ಇಕೋ ಟೂರಿಸಂ’ಗೆ ಹೇಳಿ ಮಾಡಿಸಿದ ಪ್ರದೇಶವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬುಧವಾರ ಚಕ್ರಾ ಮತ್ತು ಸಾವೇಹಕ್ಲು ಅವಳಿ ಜಲಾಶಯಗಳಿಗೆ ಪ್ರಥಮ ಬಾರಿಗೆ ಬಾಗಿನ ಸಮರ್ಪಿಸಿದ ಬಳಿಕ ಮಾತನಾಡಿದರು.

ಅವಳಿ ಜಲಾಶಯಗಳಿಗೆ ಬಾಗಿನ ಸಮರ್ಪಣೆ

ಈ ಅವಳಿ ಜಲಾಶಯ ಪ್ರದೇಶಗಳು ಪ್ರವಾಸೋದ್ಯಮಕ್ಕೆ ಸೂಕ್ತ ಜಾಗ. ಜನರು ಇಲ್ಲಿನ ಸೌಂದರ್ಯವನ್ನು ಆಸ್ವಾದಿಸಲು ಅವಕಾಶ ಮಾಡಿಕೊಡಬೇಕಿದೆ. ಅದರಲ್ಲೂ ನೀರು ತುಂಬಿರುವ ಸಂದರ್ಭದಲ್ಲಿ ಈ ಪ್ರದೇಶ ಎಲ್ಲರ ಕಣ್ಮನ ಸೆಳೆಯುತ್ತದೆ. ಇದರ ಸಂರಕ್ಷಣೆ ಜೊತೆಗೆ ಅಭಿವೃದ್ಧಿ ಕೂಡ ಅಗತ್ಯವಾಗಿದೆ ಎಂದರು.

ಈ ಜಲಾಶಯಕ್ಕೆ ಹೋಗಲು ಮಾಸ್ತಿಕಟ್ಟೆಯಿಂದ ಪಾಸ್ ತರಬೇಕಿದೆ. ಸ್ಥಳೀಯವಾಗಿಯೇ ಪಾಸ್ ನೀಡಿದರೆ ಜನರಿಗೆ ಅನುಕೂಲವಾಗುತ್ತದೆ. ಕರಿಮನೆ ಗ್ರಾಮ ಪಂಚಾಯಿತಿಯಲ್ಲಿ ಪಾಸ್ ಕೊಡುವ ವ್ಯವಸ್ಥೆ ಮಾಡುವ ಸಂಬಂಧ ಕೆಪಿಸಿ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದರು.

ಶಾಪವೂ ಹೌದು ವರವೂ ಹೌದು: ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, ‘ಇಲ್ಲಿನ ಜಲಾನಯನ ಪ್ರದೇಶ ಅದ್ಭುತವಾಗಿದೆ. ಎಲ್ಲೆಲ್ಲೂ ನೀರು ಕಾಣುತ್ತಿದೆ. ಮಲೆನಾಡಿಗೆ ಈ ನೀರು ಶಾಪವೂ ಹೌದು. ಆದರೆ ದೇಶದ ಪ್ರಾಕೃತಿಕ ಸಂಪನ್ಮೂಲದ ದೃಷ್ಟಿಯಿಂದ ವರವೂ ಹೌದು. ಪ್ರವಾಸೋದ್ಯಮದ ಜೊತೆಗೆ ಉದ್ಯೋಗ ಸೃಷ್ಟಿ ಆಗುವಂತ ಯೋಜನೆಗಳು ರೂಪಿಸಬೇಕಾಗಿದೆ’ ಎಂದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ