Breaking News

ಹುಬ್ಬಳ್ಳಿ | ನೈರುತ್ಯ ರೈಲ್ವೆ: ಜುಲೈನಲ್ಲಿ ₹ 286.28 ಕೋಟಿ ಆದಾಯ

Spread the love

ಹುಬ್ಬಳ್ಳಿ: ನೈರುತ್ಯ ರೈಲ್ವೆಯು ಕಳೆದ ಜುಲೈ ತಿಂಗಳಲ್ಲಿ ವಿವಿಧ ವಿಭಾಗಗಳಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದೆ. ಪ್ರಯಾಣಿಕರಿಂದ ₹ 286.28 ಕೋಟಿ ಆದಾಯ ಗಳಿಸಿದೆ. ಇದು ಹಿಂದಿನ ವರ್ಷದ ₹ 266.27 ಕೋಟಿಗೆ ಹೋಲಿಸಿದರೆ ಶೇ 7.51 ರಷ್ಟು ಹೆಚ್ಚಳವಾಗಿದೆ.

ಹುಬ್ಬಳ್ಳಿ | ನೈರುತ್ಯ ರೈಲ್ವೆ: ಜುಲೈನಲ್ಲಿ ₹ 286.28 ಕೋಟಿ ಆದಾಯ

ಪಾರ್ಸಲ್‌ ಆದಾಯವು ₹ 14.19 ಕೋಟಿಗೆ ತಲುಪಿದ್ದು, ಹಿಂದಿನ ವರ್ಷ ₹ 12.83 ಕೋಟಿ ಗಳಿಸಿತ್ತು.

ಶೇ 10.60ರಷ್ಟು ಏರಿಕೆಯಾಗಿದೆ. ಹೆಚ್ಚುವರಿಯಾಗಿ, ಇತರ ಕೋಚಿಂಗ್ ಆದಾಯವು ಕಳೆದ ವರ್ಷದ ₹ 23.67 ಕೋಟಿಯಿಂದ ₹ 25.01 ಕೋಟಿಗೆ ಏರಿದೆ. ಶೇ 5.66ರಷ್ಟು ವೃದ್ಧಿಯಾಗಿದೆ.

ಈ ಅವಧಿಯಲ್ಲಿ 13.25 ಮಿಲಿಯನ್‌ (ದಶಲಕ್ಷ) ಜನರು ಪ್ರಯಾಣಿಸಿದ್ದಾರೆ. ಹಿಂದಿನ ವರ್ಷದಲ್ಲಿ 13 ದಶಲಕ್ಷ ಜನರು ಪ್ರಯಾಣಿಸಿದ್ದರು. ಶೇ 1.92 ವೃದ್ಧಿಯಾಗಿದೆ. ಟಿಕೆಟ್ ಇಲ್ಲದೇ ಪ್ರಯಾಣಿಸಿದ್ದ 42 ಸಾವಿರ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ₹ 2.32 ಕೋಟಿ ಹೆಚ್ಚುವರಿ ಆದಾಯ ಗಳಿಸಿದೆ.

ಸರಕು ಸಾಗಾಟದಿಂದ ₹ 329.68 ಕೋಟಿ ಆದಾಯ ಬಂದಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ